Tuesday, April 28, 2026
Tuesday, April 28, 2026

ಜ. 10- ಉಡುಪಿ ಜಿಲ್ಲೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ

ಜ. 10- ಉಡುಪಿ ಜಿಲ್ಲೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ

Date:

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜನವರಿ 10 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಇಂಡಸ್ಟ್ರಿಯಲ್ ಕೆ.ಎಂ.ಎಫ್, ಮಣಿಪಾಲ ಟೌನ್ ಮತ್ತು ಮೂಡುಬೆಳ್ಳೆ ಫೀಡರಿನಲ್ಲಿ ಹಾಗೂ 11ಕೆವಿ ಹಿರಿಯಡ್ಕ ಫೀಡರಿನಲ್ಲಿ ಮೆಂಟೆನೆನ್ಸ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಶಿವಳ್ಳಿ ಇಂಡಸ್ಟ್ರಿಯಲ್ ಏರಿಯಾ, ಈಶ್ವರನಗರ, ಸರಳೇಬೆಟ್ಟು, ಅರ್ಬಿ, ಪ್ರಗತಿನಗರ, 80 ಬಡಗುಬೆಟ್ಟು, ಮಣಿಪಾಲ ಟೌನ್, ವೇಣುಗೋಪಾಲ ಟೆಂಪಲ್ ಹತ್ತಿರ, ಮಣಿಪಾಲ ಮೀಡಿಯಾ ನೆಟ್‍ವರ್ಕ್, ಮಣಿಪುರ, ಮೂಡುಬೆಳ್ಳೆ, ಮರ್ಣೆ, ಕಟ್ಟಿಂಗೇರಿ, ಕೆಮ್ತೂರು, ಹಿರಿಯಡ್ಕ ಪೇಟೆ, ಪಾಪುಜೆ, ಬಜೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

110/11ಕೆವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ ಬ್ರಹ್ಮಾವರ, ಮಾಬುಕಳ, ಚಾಂತಾರು, ಉಪ್ಪೂರು, ಕೊಳಲಗಿರಿ, ಚೇರ್ಕಾಡಿ ಹಾಗೂ 110/11ಕೆವಿ ನಿಟ್ಟೂರು ಉಪವಿದ್ಯುತ್ ಕೇಂದ್ರದಿಂದ ಹೊರಡುವ ಕಲ್ಯಾಣಪುರ ಮತ್ತು ಶಾಂತಿವನ ಫೀಡರಿನಲ್ಲಿ ಹಾಗೂ 220/110/11ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರ ಹೆಗ್ಗುಂಜೆ ಉಪಕೇಂದ್ರದಿಂದ ಹೊರಡುವ ಹೆಗ್ಗುಂಜೆ ಮತ್ತು ನಂಚಾರು ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೇಳೂರುಜೆಡ್ಡು, ಬ್ರಹ್ಮಾವರ, ರಥಬೀದಿ, ವಾರಂಬಳ್ಳಿ, ಕುಮ್ರಗೋಡು, ಉಪ್ಪಿನಕೋಟೆ, ಬಾಳ್ತಾರು, ಸೂಲ್ಕುದ್ರು, ನಂದಿಗುಡ್ಡೆ, ಕೊಳಂಬೆ, ಮಾರಿಕಟ್ಟೆ, ಉಪ್ಪೂರು, ಮಾಯಾಡಿ, ಸಾಲ್ಮರ, ಕುದ್ರುಬೆಟ್ಟು, ಕೆ.ಜಿ ರೋಡ್, ಕೋಟೆ ರೋಡ್, ನಿಡಂಬಳ್ಳಿ, ಕಲ್ಯಾಣಪುರ, ಉಗ್ಗೇಲ್ ಬೆಟ್ಟು, ಜಾತಬೆಟ್ಟು, ಹಾವಂಜೆ, ಹೇರೂರು, ಚಾಂತಾರು, ಕುಂಜಾಲು, ಆರೂರು, ಚೇರ್ಕಾಡಿ, ಹಲುವಳ್ಳಿ, ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೆಂಗ್ರೆ, ಗೋಪಾಲಪುರ, ಶಾಂತಿವನ, ಗರಡಿಮಜಲು, ಹೆಗ್ಗುಂಜೆ, ಕಾಡೂರು, ಪೆಜಮಂಗೂರು, ಕೊಕ್ಕರ್ಣೆ, ಕೆಂಜೂರು, ಶಿರೂರು, ಹಿಲಿಯಾಣ, ನಂಚಾರು, ಮುದ್ದೂರು, ಕಜ್ಕೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

220/110/11 ಕೆ.ವಿ ಕೇಮಾರ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಫೀಡರ್‍ಗಳಾದ ನಿಟ್ಟೆ, ಕಲ್ಯಾ, ಲೆಮಿನಾ, ನಿಟ್ಟೆ ವಾಟರ್ ಸಫ್ಲೈ, 110ಕೆವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಪದವು ಫೀಡರ್ ಹಾಗೂ 110 ಕೆ.ವಿ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಫೀಡರ್‍ಗಳಾದ ಮುಂಡ್ಕೂರು, ನಂದಳಿಕೆ, ಬೋಳ ಮತ್ತು ಬೆಳ್ಮಣ್ ಫೀಡರ್‍ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಿಟ್ಟೆ, ನಿಟ್ಟೆ ಕಾಲೇಜು, ನಿಟ್ಟೆ ವಾಟರ್ ಸಫ್ಲೈ, ಬೊರ್ಗಲ್ ಗುಡ್ಡೆ, ಹಾಮಾಜೆ, ಕುಂಟಾಡಿ, ಕೈರಬೆಟ್ಟು, ನಿಟ್ಟೆ ಪಂಚಾಯತ್, ನಿಟ್ಟೆ ಮಸೀದಿ, ಲೆಮಿನಾ ಇಂಡಸ್ಟ್ರಿಸ್, ದೂಪದಕಟ್ಟೆ, ಕೆಮ್ಮಣ್ಣು, ಗುಂಡ್ಯಡ್ಕ, ಕಲ್ಲಂಬಾಡಿ, ಪದವು, ನೆಲ್ಲಿಗುಡ್ಡೆ, ಬಾರಾಡಿ, ಬೇಲಾಡಿ, ಕಾಂತಾವರ, ಕಲ್ಯಾ, ಬೆಳ್ಮಣ್, ಬೆಳ್ಮಣ್ ದೇವಸ್ಥಾನ, ಗೋಳಿಕಟ್ಟೆ, ನಂದಳಿಕೆ, ಜಂತ್ರ, ನೀಚಾಲು, ಕೆದಿಂಜೆ, ಅಂಬರಾಡಿ, ಬೋಳ ಪಂಚಾಯತ್, ಪಿಲಿಯೂರು, ಕೆರೆಕೋಡಿ, ಒಂಜಾರೆ ಕಟ್ಟೆ, ಬಾರೆಬೈಲು, ಪುಕ್ಕಲ್ಲು, ಕೆಂಪುಜೋರ, ಮಾವಿನಕಟ್ಟೆ, ದೇಂದೊಟ್ಟು ಪದವು, ಇಟ್ಟಮೇರಿ, ಕೊರಜೆ, ಮುಂಡ್ಕೂರು, ಕಾಂಜರಕಟ್ಟೆ, ಸಚ್ಚರಿಪೇಟೆ, ಮುಲ್ಲಡ್ಕ, ಕೋಡಿಮಾರು, ಸಂಕಲಕರಿಯ, ನಾನಿಲ್ ತಾರ್, ಜಾರಿಗೆಕಟ್ಟೆ, ಪರಪ್ಪಾಡಿ, ಲೆಮಿನಾ ಕ್ರಾಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

33 ಕೆ.ವಿ ಬೈಂದೂರು ಹಾಗೂ 11 ಕೆ.ವಿ ಮರವಂತೆ ಮಾರ್ಗಗಳಲ್ಲಿ ಮಾರ್ಗ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 33 ಕೆ.ವಿ ಬೈಂದೂರು ಮಾರ್ಗ ಹಾಗೂ 33/11 ಕೆ.ವಿ ಬೈಂದೂರು ಉಪಕೇಂದ್ರದಿಂದ ಹೊರಡುವ 11 ಕೆ.ವಿ ಶಿರೂರು, ಉಪ್ಪುಂದ, ಗಂಗನಾಡು, ಬೈಂದೂರು, ತೂದಳ್ಳಿ, ಕೊಲ್ಲೂರು ಫೀಡರ್‍ಗಳ ಹಾಗೂ 110/33/11ಕೆ.ವಿ ನಾವುಂದ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಮರವಂತೆ ಫೀಡರ್‍ನ ಬೈಂದೂರು, ಶಿರೂರು, ಯಡ್ತರೆ, ತಗ್ಗರ್ಸೆ, ಬಿಜೂರು, ಉಪ್ಪುಂದ, ಪಡುವರಿ, ನಂದನವನ, ಕೆರ್ಗಾಲ್, ಕಂಬದಕೋಣೆ, ನಾಯ್ಕನಕಟ್ಟೆ, ಯಳಜಿತ್, ಗೋಳಿಹೊಳೆ, ಕೊಲ್ಲೂರು, ಮರವಂತೆ ಹಾಗೂ ನಾವುಂದ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

110/33/11ಕೆ.ವಿ ಕುಂದಾಪುರ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಅಂಪಾರು, ಬಳ್ಕೂರು ಮತ್ತು ಜಪ್ತಿ ವಾಟರ್ ಸಫ್ಲೈ ಮಾರ್ಗಗಳಲ್ಲಿ ಟ್ರೀ ಟ್ರಿಮ್ಮಿಂಗ್ ಮತ್ತು ಮಾರ್ಗ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಅಂಪಾರು, ಹಳ್ನಾಡು, ಕಾವ್ರಾಡಿ, ಶಂಕರನಾರಾಯಣ, ಕೋಣಿ, ಬಳ್ಕೂರು, ಕಂಡ್ಲೂರು, ಮೂಡ್ಲಕಟ್ಟೆ, ಕುಂದಾಪುರ ಪುರಸಭೆಯ ಕುಡಿಯುವ ನೀರಿನ ಸ್ಥಾವರ, ಬಸ್ರೂರು, ಆನಗಳ್ಳಿ ಮತ್ತು ಕಂದಾವರ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

33/11 ಕೆ.ವಿ ಗಂಗೊಳ್ಳಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಗಂಗೊಳ್ಳಿ, ಮುಳ್ಳಿಕಟ್ಟೆ ಮತ್ತು ತ್ರಾಸಿ ಮಾರ್ಗಗಳಲ್ಲಿ ಮಾರ್ಗ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಗಂಗೊಳ್ಳಿ, ಮುಳ್ಳಿಕಟ್ಟೆ, ಹೊಸಾಡು, ಗುಜ್ಜಾಡಿ ಮತ್ತು ತ್ರಾಸಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/11 ಕೆ.ವಿ ಹಾಲಾಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬಿದ್ಕಲ್‍ಕಟ್ಟೆ ಮಾರ್ಗದಲ್ಲಿ ಪಾಲನಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬಿದ್ಕಲ್‍ಕಟ್ಟೆ, ಕಕ್ಕುಂಜೆ, ಹಾಲಾಡಿ-76, ಹೆಸ್ಕತ್ತೂರು, ಹಾಲಾಡಿ-28, ಹಳ್ಳಾಡಿ-ಹರ್ಕಾಡಿ, ಮೊಳಹಳ್ಳಿ, ಹಾರ್ದಳ್ಳಿ-ಮಂಡಳ್ಳಿ, ಶಂಕರನಾರಾಯಣ ಮತ್ತು ಯಡಾಡಿ ಮತ್ಯಾಡಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಷ್ಟ್ರೀಯ ಗೋಮಾತೆ ಗೌರವ ಅಭಿಯಾನ ಸರಕಾರಕ್ಕೆ ಮನವಿ ಸಲ್ಲಿಕೆ

ಬ್ರಹ್ಮಾವರ, ಏ.27: ಗೋಮಾತೆಯ ಗೌರವ ಅಭಿಯಾನ ಅಂಗವಾಗಿ ಗೋಮಾತಾ ಗೌರವ ದಿನಾಚರಣೆಯನ್ನು...

ಕಸ್ತೂರ್ಬಾ ಆಸ್ಪತ್ರೆ: ವೃತ್ತಿಪರರ ಸಪ್ತಾಹ 2026 ಆಚರಣೆ

ಮಣಿಪಾಲ, ಏ.27: ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲವು ಏಪ್ರಿಲ್ 25 ರಂದು ವೈದ್ಯಕೀಯ...

ಶ್ರೀ ಕೃಷ್ಣ ಮಠಕ್ಕೆ ಉತ್ತರಾಧಿ ಮಠದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರ ಭೇಟಿ

ಉಡುಪಿ, ಏ.27: ಪರ್ಯಾಯ ಶ್ರೀ ಶೀರೂರು ಮಠ ಪರ್ಯಾಯ ಪೀಠಾಧೀಶರಾದ ಶ್ರೀ...

ನಾಗಬನದಲ್ಲಿ ಅಪೂರ್ವ ಕಾರ್ಯಕ್ರಮ

ಉಡುಪಿ, ಏ.26: ಸುಮಾರು ಒಂದು ಸಾವಿರ ವರ್ಷಗಳ ಹಳೆಯ ಶ್ರೀ ನಾಗಬ್ರಹ್ಮಸ್ಥಾನ...
error: Content is protected !!