Sunday, January 19, 2025
Sunday, January 19, 2025

ಉಡುಪಿ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತೀ ಹೆಚ್ಚು ಮಹಿಳಾ ಮತದಾರರು

ಉಡುಪಿ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತೀ ಹೆಚ್ಚು ಮಹಿಳಾ ಮತದಾರರು

Date:

ಉಡುಪಿ: ರಾಜ್ಯದಲ್ಲಿ ಇತ್ತೀಚೆಗೆ ನಡೆದ 2023 ರ ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ ನಂತರ ಪ್ರಕಟಿಸಲಾದ ಅಂತಿಮ ಮತದಾರರ ಪಟ್ಟಿ ಪ್ರಕಾರ ಉಡುಪಿ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತೀ ಹೆಚ್ಚು ಮಹಿಳಾ ಮತದಾರರಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ ಅತ್ಯಂತ ಕಡಿಮೆ ಮಹಿಳಾ ಮತದಾರರಿದ್ದಾರೆ. ಈ ಕುರಿತು ರಾಜ್ಯ ಮುಖ್ಯ ಚುನಾವಣಾ ಆಯುಕ್ತರು ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ ನಂತರ ರಾಜ್ಯದಲ್ಲಿ ಒಟ್ಟು 5,05,48,553 ಮತದಾರರಿದ್ದು, 2,54,49,725 ಪುರುಷ ಮತ್ತು 2,50,94,326 ಮಹಿಳಾ ಮತದಾರರಿದ್ದು , ಮಹಿಳೆಯರಿಗೆ ಹೋಲಿಸಿದರೆ ಪುರುಷ ಮತದಾರರು ಅಧಿಕವಾಗಿದ್ದಾರೆ. ಆದರೆ ಉಡುಪಿ ಜಿಲ್ಲೆಯಲ್ಲಿನ ಒಟ್ಟು 10,16,245 ಮತದಾರರಲ್ಲಿ 4,90,060 ಪುರುಷರು ಮತ್ತು 5,26,173 ಮಹಿಳಾ ಮತದಾರರು ಮತ್ತು 12 ಲಿಂಗತ್ವ ಅಲ್ಪ ಸಂಖ್ಯಾತರಿದ್ದಾರೆ.

ಉಡುಪಿ ಜಿಲ್ಲೆಯ ವಿಧಾನಸಭಾ ಕ್ಷೇತ್ರವಾರು ಪರಿಶೀಲಿಸಿದ್ದಲ್ಲಿ ಬೈಂದೂರಿನ ಒಟ್ಟು, 2,29,550 ಮತದಾರರಲ್ಲಿ 1,12,126 ಪುರುಷರು ಮತ್ತು 1,17,421 ಮಹಿಳಾ ಮತದಾರರು, ಕುಂದಾಪುರದ ಒಟ್ಟು 2,04,525 ಮತದಾರರಲ್ಲಿ 98,224 ಪುರುಷರು ಮತ್ತು 1,06,298 ಮಹಿಳಾ ಮತದಾರರು, ಉಡುಪಿಯ ಒಟ್ಟು 2,11,631 ಮತದಾರರಲ್ಲಿ 1,02,192 ಪುರುಷರು ಮತ್ತು 1,09,439 ಮಹಿಳಾ ಮತದಾರರು, ಕಾಪುವಿನ ಒಟ್ಟು 1,84,088 ಮತದಾರರಲ್ಲಿ 88,114 ಪುರುಷರು ಮತ್ತು 95,968 ಮಹಿಳಾ ಮತದಾರರು, ಕಾರ್ಕಳದ ಒಟ್ಟು 1,86,451 ಮತದಾರರಲ್ಲಿ 89,404 ಪುರುಷರು ಮತ್ತು 97,047 ಮಹಿಳಾ ಮತದಾರರಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಮಹಿಳಾ ಮತದಾರರ ಸಂಖ್ಯೆ ಪುರುಷ ಮತದಾರರಿಗಿಂತ ಅಧಿಕವಾಗಿದೆ.

ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ ಅವಧಿಯಲ್ಲಿ 13816 ಯುವ ಮತದಾರರು ನೊಂದಣಿಯಾಗಿದ್ದು ಇದರಲ್ಲೂ ಸಹ ಯುವತಿಯರ ನೊಂದಣಿ ಸಂಖ್ಯೆ ಅಧಿಕವಾಗಿದೆ. ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯಲ್ಲಿ ಯುವ ಮತದಾರರ ಸೇರ್ಪಡೆಗೆ ಹೆಚ್ಚಿನ ಆದ್ಯತೆ ನೀಡಿದ್ದು, ಜಿಲ್ಲೆಯ ಎಲ್ಲಾ ಕಾಲೇಜುಗಳಲ್ಲಿ ವಿಶೇಷ ನೊಂದಣಿ ಆಭಿಯಾನ ನಡೆಸಲಾಗಿದೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಣೆಯುಂದ ನೊಂದಣಿ ಮತ್ತು ತಿದ್ದುಪಡಿಗೆ ಅರ್ಜಿಗಳನ್ನು ಸಲ್ಲಿಸಿದ್ದು, ಎಲ್ಲಾ ಅರ್ಜಿಗಳನ್ನು ಯಾವುದೇ ಆಕ್ಷೇಪಗಳಿಗೆ ಅವಕಾಶವಿಲ್ಲದಂತೆ ವಿಲೇವಾರಿ ಮಾಡಲಾಗಿದೆ. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಮತದಾರರು ಇರುವುದರಿಂದ ಜಿಲ್ಲೆಯು ರಾಜ್ಯಕ್ಕೇ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!