Sunday, January 19, 2025
Sunday, January 19, 2025

ಉಡುಪಿ- ಬಾಲಕಿಗೆ ಮಾನಸಿಕ ಕಿರುಕುಳ ನೀಡಿದ ಆರೋಪಿಗೆ ಶಿಕ್ಷೆ

ಉಡುಪಿ- ಬಾಲಕಿಗೆ ಮಾನಸಿಕ ಕಿರುಕುಳ ನೀಡಿದ ಆರೋಪಿಗೆ ಶಿಕ್ಷೆ

Date:

ಉಡುಪಿ: ಬಾಲಕಿಗೆ ಮದುವೆಯಾಗುವಂತೆ ಒತ್ತಾಯಿಸಿ, ಮಾನಸಿಕ ಕಿರುಕುಳ ನೀಡಿ ಕೊಲೆ ಬೆದರಿಕೆ ಒಡ್ಡಿದ ಆರೋಪಿಗೆ ನಗರದ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

2013 ಏಪ್ರಿಲ್ 6 ರಂದು ಸಂಜೆ 4.30 ರ ಸುಮಾರಿಗೆ ಉಡುಪಿ ತಾಲೂಕು ಕಡಿಯಾಳಿಯ ನಿವಾಸಿ ಮಧು ಎಂಬಾತನು, ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಕಲ್ಸಂಕ ಬಳಿಯ ಬಡಗುಪೇಟೆಗೆ ಹೋಗುವ ರಸ್ತೆಯಲ್ಲಿ ಬಾಲಕಿಯನ್ನು ಹಿಂಬಾಲಿಸಿದ್ದಲ್ಲದೇ, ಆಕೆಯನ್ನು ಮದುವೆ ಮಾಡಿಕೊಡದಿದ್ದಲ್ಲಿ ಬಾಲಕಿ ಹಾಗೂ ಆಕೆಯ ತಾಯಿಯನ್ನು ಕೊಲೆ ಮಾಡುವುದಾಗಿ ಜೀವ ಬೆದರಿಕೆ ಒಡ್ಡಿದ ಹಿನ್ನೆಲೆ, ಉಡುಪಿ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ರವರು ಆರೋಪಿ ಮಧು ಎಂಬಾತನಿಗೆ 5 ವರ್ಷ ಕಾರಾಗೃಹ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ, ತೀರ್ಪು ನೀಡಿರುತ್ತಾರೆ.

ಸರಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಮೋಹಿನಿ ಕೆ. ವಾದ ಮಂಡಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!