Tuesday, January 21, 2025
Tuesday, January 21, 2025

ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ- ಮಹಿಳಾ ಸುರಕ್ಷತಾ ಅರಿವು ಕಾರ್ಯಕ್ರಮ

ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ- ಮಹಿಳಾ ಸುರಕ್ಷತಾ ಅರಿವು ಕಾರ್ಯಕ್ರಮ

Date:

ಉಡುಪಿ: ತಂತ್ರಜ್ಞಾನ ಬೆಳದಂತೆ ಮೋಸದ ಬಲೆಯಲ್ಲಿ ಬೀಳಿಸಲು ಪ್ರಯತ್ನಿಸುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಅವಿದ್ಯಾವಂತರಿಗಿಂತ ವಿದ್ಯಾವಂತರೆ ಹೆಚ್ಚು ಹೆಚ್ಚು ಮೋಸದ ಬಲೆಗೆ ಬೀಳುತ್ತಿದ್ದಾರೆ. ಪ್ರಸ್ತುತ ಸನ್ನಿವೇಶದಲ್ಲಿ ಹೆಣ್ಣು ಮಕ್ಕಳು ಮತ್ತು ಮಹಿಳೆಯರು ತಮ್ಮ ಬಗ್ಗೆ ಜಾಗರೂಕರಾಗಿರುವ ಅವಶ್ಯಕತೆ ಹೆಚ್ಚಾಗುತ್ತಿದೆ. ಸ್ವರಕ್ಷಣೆ ಮತ್ತು ಜಾಗರೂಕತೆ ಎಲ್ಲ ಕಾಲ ಮತ್ತು ಸನ್ನಿವೇಶಗಳಲ್ಲೂ ಮಹಿಳೆಯರಿಗೆ ಭೂಷಣ ಎಂದು ಉಡುಪಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವೆಲೆಟಾ ಫೆಮಿನಾ ಅಭಿಪ್ರಾಯಪಟ್ಟರು.

ಅವರು ಉಡುಪಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ನಡೆದ ಮಹಿಳಾ ಸುರಕ್ಷತಾ ಅರಿವು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಶಾಂತಿ ಪ್ರಭು ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕಾಗಿ ಇರುವ ಸರಕಾರಿ ಸೌಲಭ್ಯ ಮತ್ತು ಯೋಜನೆಗಳ ಕುರಿತು ಮಾಹಿತಿಯನ್ನು ನೀಡಿದರು.

ಆರ್ ಡಿ ಎಸ್ ಸಂಸ್ಥೆ, ಶಾಲೆಯ ಗ್ರಾಹಕ ಕ್ಲಬ್ ಮತ್ತು ಎನ್ ಎಸ್ ಎಸ್ ಘಟಕದ ಸಹಯೋಗದಲ್ಲಿ ಸಮುದಾಯ ಜಾಗೃತಿ, ಭಾಗವಹಿಸುವಿಕೆ, ಪುನರ್ವಸತಿ ಹಾಗೂ ಪುನರ್ ನಿರ್ಮಾಣ ಚಟುವಟಿಕೆಗಳ ಅಡಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ಅಧ್ಯಕ್ಷತೆಯನ್ನು ವಹಿಸಿದ್ದರು.

ಸಮುದಾಯ ಅಭಿವೃದ್ಧಿ ಸಹಾಯಕರಾದ ಮಾಲತೇಶ್, ಎನ್ ಎಸ್ ಎಸ್ ನ ಮಂಜುಳಾ, ಗ್ರಾಹಕ ಕ್ಲಬ್ ನ ಉಪಾಧ್ಯಕ್ಷೆ ಅನಘಾ ಹೊಳ್ಳ ಉಪಸ್ಥಿತರಿದ್ದರು. ಶಿಕ್ಷಕ ರಾಮಚಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದರು. ಆರ್ ಡಿ ಎಸ್ ಸಂಸ್ಥೆಯ ಟೀಮ್ ಲೀಡರ್ ಜ್ಯೋತಿ ಸ್ವಾಗತಿಸಿ, ಮಹೇಶ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!