Thursday, January 23, 2025
Thursday, January 23, 2025

ಸಾಲ-ಸಹಾಯಧನ ಯೋಜನೆ: ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

ಸಾಲ-ಸಹಾಯಧನ ಯೋಜನೆ: ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

Date:

ಉಡುಪಿ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ವಿವಿಧ ವರ್ಗದ ಕುಶಲಕರ್ಮಿಗಳಿಗೆ ತಲಾ 50,000 ರೂ. ವರೆಗೆ ಸಾಲ-ಸಹಾಯಧನ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ವಾಣಿಜ್ಯ ಬ್ಯಾಂಕ್, ಸಹಕಾರ ಬ್ಯಾಂಕ್ ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ (ಪತ್ತಿನ ಸಹಕಾರ ಸಂಘಗಳನ್ನು ಹೊರತುಪಡಿಸಿ) ಗಳಿಂದ ಮಂಜೂರಾದ ಸಾಲದ ಮೇಲೆ ಇಲಾಖೆ ವತಿಯಿಂದ ಶೇ. 30 ರಷ್ಟು ಗರಿಷ್ಠ 15,000 ರೂ. ವರೆಗೆ ಸಹಾಯಧನ ನೀಡಲಾಗುವುದು.

ಜಿಲ್ಲೆಯ 18 ವರ್ಷ ಮೇಲ್ಪಟ್ಟ ಕಮ್ಮಾರಿಕೆ, ಮರಗೆಲಸ, ಬುಟ್ಟಿ ಹೆಣೆಯುವವರು, ಗೋಲ್ಡ್ ಸ್ಮಿತ್ (ಆಭರಣ ತಯಾರಿಕೆ), ಕಲ್ಲಿನ ಕೆತ್ತನೆ, ಮರದ ಕೆತ್ತನೆಗಳು, ಕುಂಬಾರಿಕೆ, ಟೆರಾಕೋಟ್, ಮಣ್ಣಿನ ವಿಗ್ರಹ ತಯಾರಿಕೆ, ಲೋಹದ ಕರಕುಶಲ, ಬೆತ್ತ ಬಿದಿರು, ಕಸೂತಿ ಕಲೆ (ಎಂಬ್ರಾಯಿಡರಿ) ಹಾಗೂ ಕೋಕೋನಟ್ ಶೆಲ್ ಕ್ರಾಪ್ಟ್ ಕುಶಲಕರ್ಮಿಗಳು ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಜನವರಿ 25 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ಅಥವಾ ಕೈಗಾರಿಕಾ ವಿಸ್ತರಣಾಧಿಕಾರಿ, ಉಡುಪಿ ಮೊ.ನಂ: 8310828195 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಂಜೀವಿನಿ ಸ್ವ ಸಹಾಯ ಗುಂಪುಗಳ ಆರ್ಥಿಕ ಸೇರ್ಪಡೆಗಾಗಿ ಬ್ಯಾಂಕರ್ಸ್ ಕಾರ್ಯಾಗಾರ

ಮಣಿಪಾಲ, ಜ.22: ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ ಬ್ಯಾಂಕ್ ಸೌಲಭ್ಯಗಳನ್ನು ಒದಗಿಸುವುದರಿಂದ...

ರಾಜ್ಯದಲ್ಲಿ ಗೋವುಗಳ ಮೇಲೆ ಆಕ್ರಮಣ- ಜ.25 ರಂದು ಉಪವಾಸಕ್ಕೆ ಪೇಜಾವರ ಶ್ರೀ ಕರೆ

ಉಡುಪಿ, ಜ.22: ರಾಜ್ಯದಲ್ಲಿ ಗೋವುಗಳ ಮೇಲೆ ಸರಣಿ ಹಿಂಸೆಗಳು ನಡೆಯುತ್ತಿದ್ದು ಗೋವುಗಳ...

ಕೆಎಂಸಿ ಮಣಿಪಾಲಕ್ಕೆ ಪ್ರತಿಷ್ಠಿತ ಸ್ಪಾರ್ಕ್ ಅನುದಾನ

ಮಣಿಪಾಲ, ಜ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ನೇತ್ರಶಾಸ್ತ್ರ ವಿಭಾಗದ...

ಮಲ್ಪೆ: ಸಿರಿಧಾನ್ಯ ರೋಡ್ ಶೋ

ಉಡುಪಿ, ಜ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಉಡುಪಿ...
error: Content is protected !!