ಕಾರ್ಕಳ: ನೀರೆ ಬೈಲೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಪರಶುರಾಮ ಥೀಮ್ ಪಾರ್ಕ್ ನ ಉದ್ಗಾಟನಾ ಸಮಾರಂಭದ ಪೂರ್ವಭಾವಿ ಸಭೆ ಸಚಿವ ವಿ. ಸುನೀಲ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು. ಉದ್ಗಾಟನಾ ಸಮಾರಂಭದ ಅಂಗವಾಗಿ ಆಯೋಜಿಸುವ ವಿವಿಧ ಕಾರ್ಯಕ್ರಮದ ವಿವರಗಳನ್ನು ತಿಳಿಸಿದರು. ಕಾರ್ಯಕ್ರಮ ಯಶಸ್ವಿಗೊಳಿಸಲು ಸಚಿವ ಸುನೀಲ್ ಕುಮಾರ್ ಕರೆ ನೀಡಿದರು. ಭೂನ್ಯಾಯ ಮಂಡಳಿಯ ಸದಸ್ಯರು ಹಾಗೂ ತಾಲೂಕು ಪಂಚಾಯತ್ ನ ಮಾಜಿ ಅಧ್ಯಕ್ಷರಾದ ವಿಕ್ರಂ ಹೆಗ್ಡೆಯವರು ಪ್ರಾಸ್ತಾವಿಕವಾಗಿ ಮಾತನಾಡಿ, ಪರಶುರಾಮರ ಇತಿಹಾಸ ಹಾಗೂ ಉದ್ಗಾಟನಾ ಸಮಾರಂಭದ ರೂಪು ರೇಷೆಗಳ ಬಗ್ಗೆ ಮಾತನಾಡಿದರು.
ತಾಲೂಕು ಪಂಚಾಯತ್ ನ ಮಾನ್ಯ ಕಾರ್ಯನಿರ್ವಾಹಣಾಧಿಕಾರಿಯವರಾದ ಗುರುದತ್ತ್, ನೀರೆ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶಾಲಿನಿ, ಉಪಾಧ್ಯಕ್ಷರಾದ ಸತೀಶ್, ಜಿಲ್ಲಾ ಪಂಚಾಯತ್ ನ ಮಾಜಿ ಸದಸ್ಯರಾದ ಸುಮಿತ್ ಶೆಟ್ಟಿ, ನೀರೆ ಬೈಲೂರು ವ್ಯ. ಸೇ. ಸ. ಬ್ಯಾಂಕ್ನ ಅಧ್ಯಕ್ಷರಾದ ರವೀಂದ್ರ ನಾಯಕ್, ಉದ್ಯಮಿ ಮಹಾವೀರ ಹೆಗ್ಡೆ, ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗುರುರಾಜ್, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೇಲ್ವಿಚಾರಕಿ ಸೌಮ್ಯ ಶೆಟ್ಟಿ, ಸಂಜೀವಿನಿ ಗುಂಪಿನ ಪ್ರತಿನಿಧಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಹಾಗೂ ಗ್ರಾಮಸ್ಥರು ಉಪಸ್ತಿತರಿದ್ದರು.
ತಾಲೂಕು ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಮಾಲಿನಿ ಜೆ ಶೆಟ್ಟಿ ಸ್ವಾಗತಿಸಿ, ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ರಮೇಶ್ ಶೆಟ್ಟಿ ವಂದಿಸಿದರು. ಪಂಚಾಯತ್ ಅಭಿವೃದ್ದಿ ಅಧಿಕಾರಿ ಅಂಕಿತಾ ನಾಯಕ್ ಕಾರ್ಯಕ್ರಮ ನಿರೂಪಿಸಿದರು.