Friday, September 20, 2024
Friday, September 20, 2024

ಜ.15- ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ವತಿಯಿಂದ ‘ಸಂಸ್ಕೃತಿ ಉತ್ಸವ’

ಜ.15- ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ವತಿಯಿಂದ ‘ಸಂಸ್ಕೃತಿ ಉತ್ಸವ’

Date:

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ವತಿಯಿಂದ ಎಂಜಿಎಂ ಕಾಲೇಜು ಉಡುಪಿ ಸಹಕಾರದೊಂದಿಗೆ ಜನವರಿ 15 ಭಾನುವಾರ ಸಂಜೆ 5.30ಕ್ಕೆ ಸರಿಯಾಗಿ ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಸಂಸ್ಕೃತಿ ಉತ್ಸವ ನಡೆಯಲಿದೆ.

ಕನ್ನಡ ನಾಡು ನುಡಿ ಸಂಸ್ಕೃತಿ ಸಾಹಿತ್ಯಕ್ಕೆ ಕೊಟ್ಟ ಅನನ್ಯ ಸೇವೆಗಾಗಿ ಹಿರಿಯ ಪತ್ರಿಕೋದ್ಯಮಿ ತರಂಗದ ವ್ಯವಸ್ಥಾಪಕ ಸಂಪಾದಕಿ ಡಾ. ಸಂಧ್ಯಾ ಎಸ್. ಪೈ ಅವರಿಗೆ ಪ್ರಭಾವತಿ ಹಾಗೂ ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಿತ ಪ್ರತಿಷ್ಠಿತ ‘ವಿಶ್ವಪ್ರಭಾ’ ಪುರಸ್ಕಾರವನ್ನು ನೀಡಲಾಗುವುದು.

ಪ್ರಶಸ್ತಿಯು ಪ್ರಶಸ್ತಿ ಪತ್ರ, ಫಲಕ ಹಾಗೂ ನಗದು ಒಂದು ಲಕ್ಷ ರೂಪಾಯಿ ಒಳಗೊಂಡಿರುತ್ತದೆ. ಸಭಾ ಕಾರ್ಯಕ್ರಮದಲ್ಲಿ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ, ಸಾಹಿತಿ ಡಾ. ಎಂ. ವೀರಪ್ಪ ಮೊಯ್ಲಿ ಉದ್ಘಾಟಿಸಲಿದ್ದಾರೆ.

ಸಭಾಧ್ಯಕ್ಷತೆಯನ್ನು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಹಿಸಲಿದ್ದು, ಅಭಿನಂದನಾ ಭಾಷಣವನ್ನು ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರು ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಹಾಗೂ ಎಂಜಿಎಂ ಕಾಲೇಜು ಪ್ರಾಂಶುಪಾಲರಾದ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಉಪಸ್ಥಿತರಿರುತ್ತಾರೆ.

ಸಭಾ ಕಾರ್ಯಕ್ರಮದ ನಂತರ ಅಂತಾರಾಷ್ಟ್ರೀಯ ಖ್ಯಾತಿಯ ಜಾದೂಗಾರರಾದ ಪ್ರೊ. ಶಂಕರ್ ಹಾಗೂ ಜೂನಿಯರ್ ಶಂಕರ್ ನೇತೃತ್ವದ ಗಿಲಿ ಗಿಲಿ ಮ್ಯಾಜಿಕ್ ಪ್ರದರ್ಶನವಿರುತ್ತದೆ ಎಂದು ಪ್ರಕಟಣೆ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!