Wednesday, January 22, 2025
Wednesday, January 22, 2025

ಕೆಎಂಸಿ ಮಣಿಪಾಲ- ಯುವ ಮಧುಮೇಹಿಗಳಿಗೆ ಶೈಕ್ಷಣಿಕ ಕಾರ್ಯಕ್ರಮ

ಕೆಎಂಸಿ ಮಣಿಪಾಲ- ಯುವ ಮಧುಮೇಹಿಗಳಿಗೆ ಶೈಕ್ಷಣಿಕ ಕಾರ್ಯಕ್ರಮ

Date:

ಮಣಿಪಾಲ: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ, ಭಾರತ ಸರ್ಕಾರದ ಅನುದಾನಿತ ಯಂಗ್ ಡಯಾಬಿಟಿಸ್ ರಿಜಿಸ್ಟ್ರಿ ಹಂತ III ಮತ್ತು ವೈದ್ಯಕೀಯ ವಿಭಾಗ, ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲವು ಮಕ್ಕಳ ವಿಭಾಗ ಮತ್ತು ಮಕ್ಕಳ ಎಂಡೋಕ್ರೈನಾಲಜಿ ಕ್ಲಿನಿಕ್ ಮಣಿಪಾಲ ಇದರ ಸಹಯೋಗದೊಂದಿಗೆ ಯುವ ಮಧುಮೇಹಿಗಳಿಗಾಗಿ ಒಂದು ದಿನದ ಶೈಕ್ಷಣಿಕ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಅನೇಕ ಯುವ ಮಧುಮೇಹಿಗಳು (2-25 ವರ್ಷ ವಯಸ್ಸಿನವರು) ತಮ್ಮ ಆರೈಕೆದಾರರೊಂದಿಗೆ ಭಾಗವಹಿಸಿದ್ದರು. ಖಾಲಿ ಹೊಟ್ಟೆಯ ರಕ್ತದ ಸಕ್ಕರೆ ಮತ್ತು ಗ್ಲೈಕೇಟೆಡ್ ಹಿಮೋಗ್ಲೋಬಿನ್ ಆಂಥ್ರೊಪೊಮೆಟ್ರಿಕ್ ಮತ್ತು ಪ್ರಮುಖ ನಿಯತಾಂಕಗಳ ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಯಿತು.

ಮಣಿಪಾಲದ ಕೆಎಂಸಿಯ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕ ಮತ್ತು ವೈಡಿಆರ್ III ರ ಪ್ರಭಾರಿ ಡಾ. ಶಿವಶಂಕರ ಕೆ.ಎನ್ ಮತ್ತು ಮಕ್ಕಳ ವಿಭಾಗದ ಮುಖ್ಯಸ್ಥ ಡಾ. ಲೆಸ್ಲಿ ಎಡ್ವರ್ಡ್ ಲೂಯಿಸ್ ಅವರ ಆರಂಭಿಕ ಮಾತುಗಳೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು.

ಡಾ. ಕೌಶಿಕ್ ಉರಾಳ ಹೆಚ್, ಸಹಾಯಕ ಪ್ರಾಧ್ಯಾಪಕರು ಮತ್ತು ಮಕ್ಕಳ ಹಾರ್ಮೋನ್ ತಜ್ಞ, ಕೆಎಂಸಿ, ಮಣಿಪಾಲ ಅವರು ಕಾರ್ಯಕ್ರಮದ ಕುರಿತು ಕಿರು ಪರಿಚಯ ನೀಡಿದರು. ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ. ಪದ್ಮರಾಜ್ ಹೆಗ್ಡೆ ಅವರು ಸಮಾರೋಪ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಗೌರವಾನ್ವಿತ ಅತಿಥಿಯಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಪಾಲ್ಗೊಂಡಿದ್ದರು.

ಯೋಗ ಕೇಂದ್ರದ ಇಂಟಿಗ್ರೇಟಿವ್ ಮೆಡಿಸಿನ್ ಮತ್ತು ರಿಸರ್ಚ್, ಮಾಹೆ, ಕ್ಲಿನಿಕಲ್ ನ್ಯೂಟ್ರಿಷನ್ ಮತ್ತು ಡಯೆಟಿಕ್ಸ್ ವಿಭಾಗ, ಫಿಸಿಯೋಥೆರಪಿ ವಿಭಾಗ ಮತ್ತು ನೇತ್ರಶಾಸ್ತ್ರ ವಿಭಾಗಗಳ ಸಹಾಯದಿಂದ ಶೈಕ್ಷಣಿಕ ಕಾರ್ಯಕ್ರಮ ನಡೆಸಲಾಯಿತು ಮತ್ತು ನಂತರ ಉಚಿತ ಯೋಗ ಸಮಾಲೋಚನೆ ಹಾಗೂ ಪ್ರದರ್ಶನ, ಸಂಪೂರ್ಣ ವೈಜ್ಞಾನಿಕ ಪೌಷ್ಟಿಕಾಂಶದ ಆಹಾರಕ್ರಮದ ಸಮಾಲೋಚನೆ ಹಾಗೂ ಪ್ರದರ್ಶನ, ಮಧುಮೇಹ ಪಾದದ ಆರೈಕೆಯ ಅರಿವು ಮತ್ತು ಮಧುಮೇಹ ಸಂಬಂಧಿತ ಕಣ್ಣಿನ ತೊಂದರೆಗಳ ತಪಾಸಣೆಯನ್ನು ಉಚಿತವಾಗಿ ನಡೆಸಲಾಯಿತು.

ಯುವ ಮಧುಮೇಹಿಗಳ ಅನುಭವ ಹಾಗೂ ಸ್ಪೂರ್ತಿದಾಯಕ ಮಾತುಗಳು, ಆಯೋಜಿಸಿದ್ದ ಆಟಗಳಲ್ಲಿ ಭಾಗವಹಿಸುವಿಕೆ, ರಸಪ್ರಶ್ನೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಈ ಕಾರ್ಯಕ್ರಮದ ಭಾಗವಾಗಿತ್ತು. ಇದು ಯುವ ರೋಗಿಗಳನ್ನು ಹುರಿದುಂಬಿಸಲು ಸಹಾಯ ಮಾಡಿತು. ಯುವ ಮಧುಮೇಹ ರೋಗಿಗಳಿಗೆ ಮತ್ತು ಅವರ ಆರೈಕೆದಾರರಿಗೆ ಪೌಷ್ಠಿಕಾಂಶವುಳ್ಳ ಪಥ್ಯ ಆಹಾರವನ್ನು ನೀಡಲಾಯಿತು.

ಮಣಿಪಾಲದ ಕೆಎಂಸಿಯ ವೈದ್ಯಕೀಯ ವಿಭಾಗದ ಐಸಿಎಂಆರ್ ವೈಡಿಆರ್ III ರ ಸಂಶೋಧನಾ ಅಧಿಕಾರಿ ಡಾ. ಅಜಿತ್ ಸಿಂಗ್ ಮತ್ತು ಸಂಶೋಧನಾ ಸಹಾಯಕಿ ಜ್ಯೋತಿ ನಾಯ್ಕ ಕಾರ್ಯಕ್ರಮವನ್ನು ಸಂಯೋಜಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಮೆರಿಕದಲ್ಲಿ H-1B ವೀಸಾ ಹೊಂದಿರುವವರ ಮಕ್ಕಳಿಗೆ ಹುಟ್ಟಿನಿಂದಲೇ ಪೌರತ್ವವಿಲ್ಲ: ಟ್ರಂಪ್ ಹೊಸ ಆದೇಶ

ನ್ಯೂಯಾರ್ಕ್, ಜ.22: ಅಮೆರಿಕದಲ್ಲಿ ನವಜಾತ ಶಿಶುವಿನ ಕನಿಷ್ಠ ಒಬ್ಬ ಪೋಷಕ ಅಮೆರಿಕನ್...

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!