Saturday, November 7, 2026
Saturday, November 7, 2026

ಉಡುಪಿ- ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಕಂಡುಬಂದಲ್ಲಿ ಅಧಿಕ ಮೊತ್ತದ ದಂಡ ವಸೂಲಿ; ಪರವಾನಿಗೆ ರದ್ದು

ಉಡುಪಿ- ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಕಂಡುಬಂದಲ್ಲಿ ಅಧಿಕ ಮೊತ್ತದ ದಂಡ ವಸೂಲಿ; ಪರವಾನಿಗೆ ರದ್ದು

Date:

ಉಡುಪಿ: ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ರಾಜ್ಯ ಸರಕಾರದ ಅರಣ್ಯ ಹಾಗೂ ಪರಿಸರ ಮತ್ತು ಜೀವಶಾಸ್ತ್ರ ಸಚಿವಾಲಯದ ಅಧಿಸೂಚನೆಯಂತೆ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಹಾಗೂ ವ್ಯವಸ್ಥಾಪನೆ ಕಾಯ್ದೆಯನ್ವಯ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಫ್ಲೆಕ್ಸ್, ಪ್ಲಾಸ್ಟಿಕ್ ಬಾವುಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಕ್ಲಿಂಗ್ ಫಿಲ್ಮ್ಸ್, ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ ಹಾಗೂ ಥರ್ಮೋಕೂಲ್ ಮತ್ತು ಪ್ಲಾಸ್ಟಿಕ್ ಮೈಕೋ ಬೀಡ್ಸ್ನಿಂದ ತಯಾರಾದಂತಹ ವಸ್ತುಗಳ ತಯಾರಿಕೆ, ಸರಬರಾಜು ಮತ್ತು ಬಳಕೆಯನ್ನು ನಿಷೇಧಿಸಿದ್ದು, ಸಾರ್ವಜನಿಕರು ಹಾಗೂ ಉದ್ದಿಮೆದಾರರು ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ 25,000 ರೂ. ದಿಂದ ಒಂದು ಲಕ್ಷದ ವರೆಗೆ ದಂಡವನ್ನು ವಿಧಿಸಿ, ಉದ್ದಿಮೆ ಪರವಾನಿಗೆಯನ್ನು ರದ್ದುಗೊಳಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮ ತಿದ್ದುಪಡಿ: ಕೇಂದ್ರ ಸರ್ಕಾರವು ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮ-2016 ಕ್ಕೆ ಸಂಬಂಧಿಸಿದಂತೆ ತಿದ್ದುಪಡಿ ಮಾಡಿ, ಅಧಿಸೂಚನೆ ಹೊರಡಿಸಿದ್ದು, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ (ತಿದ್ದುಪಡಿ) ನಿಯಮ-2021 ರ ಅಧಿಸೂಚನೆಯನ್ನು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯದ ವೆಬ್‌ಸೈಟ್‌ನಿಂದ ಪಡೆದುಕೊಳ್ಳಬಹುದು.

ನಗರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ಹಾಗೂ ಉದ್ದಿಮೆದಾರರು ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ (ತಿದ್ದುಪಡಿ) ನಿಯಮಗಳನ್ನು ಪಾಲಿಸಿ, ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ: ಗುಡುಗು ಸಹಿತ ಮಳೆ

ಉಡುಪಿ, ನ.6: ಉಡುಪಿ ಜಿಲ್ಲೆಯ ಕೆಲವೆಡೆ ಶುಕ್ರವಾರ ಸಂಜೆ ಗುಡುಗು ಸಹಿತ...

ಗೃಹಲಕ್ಷ್ಮಿ ಫಲಾನುಭವಿಗಳೊಂದಿಗೆ ಸಿಎಂ ಸಂವಾದ

ಬೆಂಗಳೂರು, ನ.6: ಗೃಹಕಚೇರಿ ಕೃಷ್ಣಾದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳೊಂದಿಗೆ ಮುಖ್ಯಮಂತ್ರಿ ಡಿ.ಕೆ....

ಉಡುಪಿ ಶ್ರೀ ಕೃಷ್ಣ ಮಠ: ಕನಕದಾಸರ ಶಿಲಾಮಯ ಗುಡಿಗೆ ಶಿಲಾನ್ಯಾಸ

ಉಡುಪಿ, ನ.6: ಕೃಷ್ಣ ಮಠದ ರಥಬೀದಿಯಲ್ಲಿರುವ ಕನಕದಾಸರ ಶಿಲಾಮಯ ಗುಡಿಗೆ ಶಿಲಾನ್ಯಾಸವನ್ನು...
error: Content is protected !!