ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ, ಶಿಶು ಅಭಿವೃದ್ಧಿ ಯೋಜನೆ ಉಡುಪಿ, ನಗರಸಭೆ ಉಡುಪಿ ಇವರ ಸಹಯೋಗದೊಂದಿಗೆ ಜಿಲ್ಲಾ ಬಾಲಭವನ ಆವರಣದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕರಾವಳಿ ಬೈಪಾಸ್ ಅಂಗನವಾಡಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ಶನಿವಾರ ನಡೆಯಿತು. ಶಾಸಕ ಕೆ. ರಘುಪತಿ ಭಟ್ ಉದ್ಘಾಟನೆ ನೆರವೇರಿಸಿದರು.
ನಗರಸಭೆಯ ಸದಸ್ಯರಾದ ಟಿ.ಜಿ ಹೆಗ್ಡೆ, ಸವಿತಾ ಹರೀಶ್ ರಾಮ್, ಅಂಗನವಾಡಿ ಕೇಂದ್ರದ ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ರೂಪ, ಶಿಶು ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿಗಳಾದ ವೀಣಾ, ಸಹಾಯಕ ಯೋಜನಾಧಿಕಾರಿಗಳಾದ ಕುಮಾರ್ ನಾಯ್ಕ್, ಅಂಗನವಾಡಿ ಮೇಲ್ವಿಚಾರಕಿ ಶೈಲಾ, ಅಂಗನವಾಡಿ ಶಿಕ್ಷಕಿ ಅನಿತಾ, ಸಹಾಯಕಿ ಗೀತಾ ಉಪಸ್ಥಿತರಿದ್ದರು.