Monday, January 20, 2025
Monday, January 20, 2025

ರಜತ ಮಹೋತ್ಸವ ಅಂಗವಾಗಿ ಚಿತ್ರಕಲಾ ಸ್ಪರ್ಧೆ

ರಜತ ಮಹೋತ್ಸವ ಅಂಗವಾಗಿ ಚಿತ್ರಕಲಾ ಸ್ಪರ್ಧೆ

Date:

ಉಡುಪಿ: ಉಡುಪಿ ಜಿಲ್ಲಾ ರಜತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಜನವರಿ 20 ರಿಂದ 22 ರ ವರೆಗೆ ಮಲ್ಪೆ ಬೀಚ್‌ನಲ್ಲಿ ಬೀಚ್ ಉತ್ಸವ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಜ. 22 ರಂದು ಬೆಳಗ್ಗೆ 10 ಗಂಟೆಗೆ ಚಿತ್ರಕಲಾ /ಪೇಂಟಿಂಗ್ ಸ್ಪರ್ಧೆಯನ್ನು ಪ್ರಾಥಮಿಕ, ಪ್ರೌಢ, ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದೆ.

1 ರಿಂದ 4 ನೇ ತರಗತಿಯ ಕಿರಿಯ ಪ್ರಾಥಮಿಕ ವಿಭಾಗದವರಿಗೆ ಐಚ್ಛಿಕ ವಿಷಯದ ಕುರಿತು, 5 ರಿಂದ 7 ನೇ ತರಗತಿಯ ಹಿರಿಯ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳ ಕುರಿತು, 8 ರಿಂದ 10 ನೇ ತರಗತಿ ವರೆಗಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಮಲ್ಪೆ ಕಡಲತೀರ ಎಂಬ ವಿಷಯದ ಕುರಿತು ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಭೂದೃಶ್ಯ ರಚನೆ ಕುರಿತು ಚಿತ್ರಕಲಾ ಸ್ಪರ್ಧೆ ನಡೆಯಲಿದ್ದು, ಭಾಗವಹಿಸಲು ಇಚ್ಛಿಸುವ ಆಸಕ್ತ ವಿದ್ಯಾರ್ಥಿಗಳು ಜನವರಿ 19 ರ ಒಳಗೆ ಸಂಬAಧಪಟ್ಟ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಯವರಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ.

ಚಿತ್ರಕಲಾ ಶಿಕ್ಷಕರಿಂದ ಮಳಿಗೆಯಲ್ಲಿ ವಿದ್ಯಾರ್ಥಿಗಳಿಂದ ಮಾಡಿಸಿದ ಚಿತ್ರಕಲೆ/ ಪೇಂಟಿಂಗ್ ಫಲಕಗಳನ್ನು ಚಿತ್ರಕಲಾ ಪ್ರದರ್ಶನ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಧನಂಜಯ ಮೊ.ನಂ: 9008198125, ರಾಘವೇಂದ್ರ ಚಾತ್ರಮಕ್ಕಿ ಮೊ.ನಂ: 9164156884, ಮಲ್ಲಪ್ಪ ಕುಂಬಾರ ಮೊ.ನಂ: 9902722987 ಹಾಗೂ ನಾಗರಾಜ್ ಎಂ ಮೊ.ನಂ:9449964968 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!