ಉಡುಪಿ: ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಇಂದು ಉಡುಪಿ ನಗರ ವ್ಯಾಪ್ತಿ ಪ್ರದೇಶಗಳ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ 4 ಮತ್ತು 6(ಎ) ಅಡಿಯಲ್ಲಿ ಒಟ್ಟು 42 ಪ್ರಕರಣ ದಾಖಲಿಸಲಾಯಿತು.
ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ರಾಷ್ಟ್ರೀಯ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರ್ತಿ ಮಂಜುಳಾ ಶೆಟ್ಟಿ, ನಗರಸಭೆಯ ಸುರೇಂದ್ರ ಹಾಗೂ ನಗರ ಪೊಲೀಸ್ ಠಾಣೆಯ ಆರಕ್ಷಕರು ಉಪಸ್ಥಿತರಿದ್ದರು.