ಗಣಿತನಗರ: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ವತಿಯಿಂದ ಇತ್ತೀಚೆಗೆ ನಿಧನರಾದ ಹೋಟೇಲ್ ಉದ್ಯಮಿ, ದಾನಿ ಜಗನ್ನಾಥ ಶೆಟ್ಟಿಯವರಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು.
ಕಾರ್ಕಳದ ಬೈಲೂರು ಓಣಿಮಜಲಿನಲ್ಲಿ ಹುಟ್ಟಿ ಪುಣೆಯಲ್ಲಿ ಹೋಟೇಲ್ ಉದ್ಯಮಿಯಾಗಿ ಬೆಳೆದು ಊರಿನ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳಿಗೆ ಪೋಷಕರಾಗುವ ಜೊತೆಗೆ, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಏಳಿಗೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು, ಅನೇಕ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಬೆನ್ನೆಲುಬಾಗಿ ನಿಂತಿದ್ದ ದಿವಂಗತರು ನಡೆದುಬಂದ ಹೆಜ್ಜೆಗುರುತುಗಳನ್ನು ಸ್ಮರಿಸಲಾಯಿತು.
ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ. ಸುಧಾಕರ್ ಶೆಟ್ಟಿ, ಟ್ರಸ್ಟಿ ಕರುಣಾಕರ್ ಶೆಟ್ಟಿ, ಪ್ರಾಂಶುಪಾಲರಾದ ದಿನೇಶ್ ಎಂ ಕೊಡವೂರು, ಉಪಪ್ರಾಂಶುಪಾಲ ಸಾಹಿತ್ಯ, ಹೈಸ್ಕೂಲ್ ಪ್ರಾಂಶುಪಾಲೆ ಉಷಾ ರಾವ್ ಯು, ಉಪಪ್ರಾಂಶುಪಾಲೆ ವಾಣಿ ಕೆ, ಪಿಆರ್‌ಒ ಜ್ಯೋತಿ ಪದ್ಮನಾಭ ಭಂಡಿ ಉಪಸ್ಥಿತರಿದ್ದರು.
ಉಪನ್ಯಾಸಕಿ ಸಂಗೀತ ಕುಲಾಲ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.