Wednesday, January 22, 2025
Wednesday, January 22, 2025

ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆಗೆ ಅವಕಾಶ

ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆಗೆ ಅವಕಾಶ

Date:

ಉಡುಪಿ: ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಜನವರಿ 24 ರಂದು ಬೈಂದೂರು ಪ್ರವಾಸಿ ಮಂದಿರ, ಜ. 27 ರಂದು ಕಾರ್ಕಳ ಪ್ರವಾಸಿ ಮಂದಿರ ಹಾಗೂ ಜ. 30 ರಂದು ಬ್ರಹ್ಮಾವರದ ಚಾಂತಾರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರ ವರೆಗೆ ಲೋಕಾಯುಕ್ತ ಕಾಯ್ದೆಯಡಿ ದಾಖಲಾಗುವ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.

ಇನ್ನುಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881 ಹಾಗೂ ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 0820-2536661 ಅಥವಾ ಅರ್ಜಿದಾರರು ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ, ಅಫಿಡವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್ ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ.

ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧವೂ ಸಹ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆಎಂಸಿ ಮಣಿಪಾಲಕ್ಕೆ ಪ್ರತಿಷ್ಠಿತ ಸ್ಪಾರ್ಕ್ ಅನುದಾನ

ಮಣಿಪಾಲ, ಜ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ನೇತ್ರಶಾಸ್ತ್ರ ವಿಭಾಗದ...

ಮಲ್ಪೆ: ಸಿರಿಧಾನ್ಯ ರೋಡ್ ಶೋ

ಉಡುಪಿ, ಜ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಉಡುಪಿ...

‘ಬೃಂದಾವನದಿಂದ ಉಡುಪಿಯೆಡೆ’ ಸಾಂಝಿ ಕಲಾಕೃತಿಗಳ ಪ್ರದರ್ಶನ

ಉಡುಪಿ, ಜ.22: ಭಾವನಾ ಫೌಂಡೇಶನ್ ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು...
error: Content is protected !!