ಕುಂದಾಪುರ: ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಂ. ಎಂ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ 1 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಆರ್ಯಭಟ ಮೊಬೈಲ್ ತಾರಾಲಯ ವೀಕ್ಷಣಾ ಕಾರ್ಯಕ್ರಮ ನಡೆಯಿತು.
ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಹವ್ಯಾಸಿ ಖಗೋಳಶಾಸ್ತ್ರಜ್ಞರೂ, ಖಗೋಳ ಚಿತ್ರಕರಾಗಿರುವ ನಂದನ್, ಆರ್ಯಭಟ ಮೊಬೈಲ್ ಪ್ಲಾನಿಟೇರಿಯಂನ ನಿರ್ದೇಶಕರಾಗಿರುವ ಸತೀಶ್, ಪ್ಲಾನಿಟೇರಿಯಂ ಆಪರೇಟರ್ ಆಗಿರುವ ಮಧುಶ್ರೀ ಆಗಮಿಸಿದ್ದರು. ಮಧುಶ್ರೀ ವಿದ್ಯಾರ್ಥಿಗಳಿಗೆ ಖಗೋಳ ಶಾಸ್ತ್ರ ಮತ್ತು ತಾರಾಮಂಡಲಗಳ ಬಗ್ಗೆ ಮಾಹಿತಿಯನ್ನು ನೀಡಿದರು. ನಂತರ ವಿದ್ಯಾರ್ಥಿಗಳು ನಕ್ಷತ್ರಗಳನ್ನು, ಆಕಾಶಕಾಯಗಳನ್ನು ವೀಕ್ಷಿಸಿದರು.
ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್, ಉಪಪ್ರಾಂಶುಪಾಲರು ಮತ್ತು ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶುಭಾ ಕೆ. ಎನ್ ಮುಂತಾದವರು ಉಪಸ್ಥಿತರಿದ್ದರು. ಶಿಕ್ಷಕಿ ಶ್ವೇತಾ ಕಾರ್ಯಕ್ರಮ ನಿರೂಪಿಸಿದರು.