Friday, September 20, 2024
Friday, September 20, 2024

ಜಲಜೀವನ್ ಮಿಷನ್: ಐ.ಇ.ಸಿ ಪ್ರಚಾರ ವಾಹನಕ್ಕೆ ಚಾಲನೆ

ಜಲಜೀವನ್ ಮಿಷನ್: ಐ.ಇ.ಸಿ ಪ್ರಚಾರ ವಾಹನಕ್ಕೆ ಚಾಲನೆ

Date:

ಉಡುಪಿ: ಜಲಜೀವನ್ ಮಿಷನ್ ಯೋಜನೆಯಡಿ ಸಾರ್ವಜನಿಕರಿಗೆ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರಿನ ಬಳಕೆ ಹಾಗೂ ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ಅರಿವು ಮೂಡಿಸುವ ನಿಟ್ಟಿನಲ್ಲಿ ಮಾಹಿತಿ, ಶಿಕ್ಷಣ ಮತ್ತು ಸಂವಹನ ಚಟುವಟಿಕೆಯ ಅಂಗವಾಗಿ ಆಟೋ ಪ್ರಚಾರಕ್ಕೆ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಆವರಣದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್ ಮಾತನಾಡಿ, ಜಲಜೀವನ್ ಮಿಷನ್ ಯೋಜನೆಯು ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಎಲ್ಲಾ ಗ್ರಾಮೀಣ ಕುಟುಂಬಗಳಿಗೆ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಯೋಜನೆ ರೂಪಿಸಲಾಗಿದೆ.

ಗ್ರಾಮೀಣ ಜನರಿಗೆ ಯೋಜನೆಯ ಅರಿವು ಮೂಡಿಸಿ ಜನರು ಯೋಜನೆಯ ಸದ್ಬಳಕೆ ಪಡೆಯುವ ಸಲುವಾಗಿ ಐ.ಇ.ಸಿ ವಾಹನದ ಮೂಲಕ ಗ್ರಾಮಗಳಿಗೆ ತೆರಳಿ ಪ್ರಚಾರ ಕಾರ್ಯ ನಡೆಸಲಾಗುವುದು ಎಂದರು. ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರ ಮೋಹನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!