ಕುಂದಾಪುರ, ಜ. 25: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಿದ್ಯಾರ್ಥಿಗಳನ್ನು ನಿಪುಣ್ ಪರೀಕ್ಷೆಗೆ ಸಿದ್ಧತೆಗೊಳಿಸುವ ನಿಟ್ಟಿನಲ್ಲಿ ಒಂದು ದಿನದ ತರಬೇತಿ ಕಾರ್ಯಕ್ರಮ ನಡೆಯಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಿದ್ಯಾರ್ಥಿಗಳು ಕಾಲೇಜು ಮತ್ತು ಸಮಾಜದ ಮಾಧ್ಯಮವಾಗಿ ಸೇವಾ ಮನೋಭಾವ ವೃದ್ಧಿಸಿಕೊಳ್ಳಬೇಕು ಎಂದರು.
ನಿಪುಣ್ ಪರೀಕ್ಷೆ ತಯಾರಿಗೆ ಸಂಬಂಧಿಸಿದಂತೆ ತರಬೇತುದಾರರಾಗಿ ಆಗಮಿಸಿದ ರೋವರ್ಸ್ ಸ್ಕೌಟ್ ಲೀಡರ್, ಹೆಚ್. ಡಬ್ಲ್ಯೂ. ಬಿ. ವಿತೇಶ್ ಕಾಂಚನ್ ತರಬೇತಿ ನೀಡಿದರು. ಮೂಡಬಿದಿರೆಯಲ್ಲಿ ನಡೆದ ಅಂತರಾಷ್ಟ್ರೀಯ ಜಾಂಬೂರಿ ಸಾಂಸ್ಕೃತಿಕ ಸಮ್ಮೇಳನದಲ್ಲಿ ಭಾಗವಹಿಸಿದ 46 ವಿದ್ಯಾರ್ಥಿಗಳನ್ನು ಪದಕ ಮತ್ತು ಪ್ರಮಾಣ ಪತ್ರಗಳೊಂದಿಗೆ ಅಭಿನಂದಿಸಲಾಯಿತು.
ಕಾಲೇಜಿನ ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ರೋವರ್ಸ್ ಲೀಡರ್ ಸತೀಶ್ ಶೆಟ್ಟಿ ಹೆಸ್ಕತ್ತೂರು ಸ್ವಾಗತಿಸಿ, ರೇಂಜರ್ ಲೀಡರ್ ಅರ್ಪಣಾ ಶೆಟ್ಟಿ ವಂದಿಸಿದರು. ವಿದ್ಯಾರ್ಥಿಗಳಾದ ವಿನಯ್ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿ, ಜಯಂತ್ ಕಾರ್ಯಕ್ರಮ ನಿರೂಪಿಸಿದರು.