ಕಾರ್ಕಳ, ಜ. 28: ರಾಜ್ಯದ ಆರ್ಥಿಕ ವಲಯಕ್ಕೆ ಕರಾವಳಿಯ ಕೊಡುಗೆ ಅನನ್ಯ. ಬಂದರುಗಳ ಅಭಿವೃದ್ಧಿ, ಮೂಲ ಉದ್ಯೋಗವನ್ನು ಉತ್ತೇಜಿಸುವ, ಪ್ರವಾಸೋದ್ಯಮವನ್ನು ಮತ್ತಷ್ಟು ವಿಸ್ತರಿಸುವ ಪ್ರಮುಖ ಕಾರ್ಯಕ್ರಮಗಳು ಬಜೆಟ್ ನಲ್ಲಿ ಘೋಷಣೆಯಾಗಲಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಶುಕ್ರವಾರ ಪರಶುರಾಮ ಥೀಮ್ ಪಾರ್ಕ್ ಉದ್ಘಾಟನೆಗಾಗಿ ಕಾರ್ಕಳಕ್ಕೆ ಭೇಟಿ ನೀಡಿದ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಹಲವಾರು ಬಾರಿ ಭೇಟಿ ನೀಡುತ್ತಿರುವ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ನಡುಕ ಉಂಟಾಗಿದೆ. ರಾಹುಲ್ ಗಾಂಧಿ ಬಂದರೆ ಜನ ಸೇರುವುದಿಲ್ಲ. ಪ್ರಧಾನಿ ಮೋದಿಯವರ ಸಭೆಗೆ ಜನಸಾಗರ ನೋಡಿ ಸಿದ್ಧರಾಮಯ್ಯ ಭಯಪಟ್ಟಿದ್ದಾರೆ ಎಂದು ಸಿಎಂ ಹೇಳಿದರು.