Thursday, September 19, 2024
Thursday, September 19, 2024

ತೆಂಕನಿಡಿಯೂರು: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ತೆಂಕನಿಡಿಯೂರು: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Date:

ಮಲ್ಪೆ, ಜ. 28: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ, ತೆಂಕನಿಡಿಯೂರು, ಲಯನ್ಸ್ ಕ್ಲಬ್ ಬ್ರಹ್ಮಾವರ, ಬಾರ್ಕೂರು ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕ, ಎನ್.ಎಸ್.ಎಸ್., ರೋವರ್ಸ್ ರೇಂಜರ್ಸ್ ಘಟಕಗಳು, ಹಳೆ ವಿದ್ಯಾರ್ಥಿ ಸಂಘ, ಸಾಂಸ್ಕೃತಿಕ ಸಂಘ, ಕ್ರೀಡಾ ಸಂಘಗಳು ಸೇರಿ ರಕ್ತನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ, ಉಡುಪಿ ಇದರ ಸಹಯೋಗದಲ್ಲಿ ಒಂದು ದಿನದ ರಕ್ತದಾನ ಶಿಬಿರ ಆಯೋಜಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆಯ ವೈದ್ಯರಾದ ಡಾ. ವೀಣಾ, ರಕ್ತದಾನ ಅತ್ಯಂತ ಪವಿತ್ರವಾದ ಸಮಾಜ ಸೇವೆಯಾಗಿದ್ದು, ಒಮ್ಮೆ ಮಾಡುವ ರಕ್ತದಾನ ಕನಿಷ್ಟ ನಾಲ್ಕು ಜೀವಗಳನ್ನು
ಉಳಿಸಬಲ್ಲುದು. ಭಾರತದಲ್ಲಿ ಜನಸಂಖ್ಯೆಗೆ ಹೋಲಿಸಿದಾಗ ವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ರಕ್ತದ ಅವಶ್ಯಕತೆಯಿದ್ದು, ವಿದ್ಯಾ ಸಂಸ್ಥೆಗಳು, ಸಾಮಾಜಿಕ ಸಂಘಟನೆಗಳು ಈ ನಿಟ್ಟಿನಲ್ಲಿ ಇನ್ನೂ ಕಾರ್ಯ ಪ್ರವರ್ತರಾಗುವ ಅವಶ್ಯಕತೆಯಿದೆ ಎಂದರು.

ಲಯನ್ಸ್ ಕ್ಲಬ್ ಬ್ರಹ್ಮಾವರ, ಬಾರ್ಕೂರು ಇದರ ಪರವಾಗಿ ಮಾತನಾಡಿದ ಕಾರ್ಯದರ್ಶಿ ಮೇಜರ್ ಬಾಲಕೃಷ್ಣ ಶೆಟ್ಟಿ, ರಕ್ತದಾನದಿಂದ ನಾವು ಮತ್ತಷ್ಟು ಆರೋಗ್ಯವಂತರಾಗಿ ಬದುಕಬಹುದು. ಯುವಜನತೆ ಇದರಲ್ಲಿ ತೊಡಗಿಸಿಕೊಳ್ಳುವುದು ಉತ್ತಮ ನಾಗರಿಕ ಜವಾಬ್ದಾರಿಯೂ ಹೌದು ಎಂದರು.

ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ ಮಾತನಾಡಿ, ತೆಂಕನಿಡಿಯೂರು ಕಾಲೇಜಿನಲ್ಲಿ ಪ್ರತಿ ವರ್ಷ ರಕ್ತದಾನ ಶಿಬಿರ ಆಯೋಜಿಸಿಕೊಂಡು ಬರುತ್ತಿದ್ದು, ಪ್ರತಿ ಬಾರಿಯೂ ನೂರಕ್ಕೂ ಮಿಕ್ಕಿ ಯೂನಿಟ್‌ಗಳ ರಕ್ತದಾನವಾಗುತ್ತಿರುವುದು ನಮ್ಮ ಹೆಮ್ಮೆ ಎಂದರು. ಲಯನ್ಸ್ ಕ್ಲಬ್ ಬ್ರಹ್ಮಾವರ ಬಾರ್ಕೂರು ಅಧ್ಯಕ್ಷರಾದ ಜಯರಾಂ ಹೆಗ್ಡೆ, ಮಾಜಿ ಅಧ್ಯಕ್ಷರಾದ ಆನಂದ ಗಾಣಿಗ, ಕಾಲೇಜಿನ ಐ.ಕ್ಯೂ.ಎ.ಸಿ. ಸಂಚಾಲಕರಾದ ಡಾ. ಮೇವಿ ಮಿರಾಂದ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಾಧಾಕೃಷ್ಣ, ಸಾಂಸ್ಕೃತಿಕ ಸಂಚಾಲಕರಾದ ಡಾ. ರಾಘವ ನಾಯ್ಕ, ಕೃಷ್ಣ, ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರೋಶನ್ ಕುಮಾರ್ ಶೆಟ್ಟಿ, ರೇಂಜರ್ಸ್ ಘಟಕದ ಡಾ. ಆಶಾ ಸಿ. ಇಂಗಳಗಿ, ಬೋಧಕ-ಬೋಧಕೇತರ ವೃಂದದ ಜೊತೆ ಜಿಲ್ಲಾ ರಕ್ತನಿಧಿ ಕೇಂದ್ರದ ಡಾ. ಮಂಜುಶ್ರೀ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ರೋವರ್ಸ್ ಸಂಚಾಲಕರಾದ ಡಾ. ಉದಯ ಶೆಟ್ಟಿ ಕೆ. ಸ್ವಾಗತಿಸಿ, ಎನ್.ಎಸ್.ಎಸ್. ವಿದ್ಯಾರ್ಥಿ ಪ್ರತಿನಿಧಿ ಶ್ರಾವ್ಯ ವಂದಿಸಿದರು. ಯೋಜನಾಧಿಕಾರಿ ಡಾ. ಮಹೇಶ್ ಕುಮಾರ್ ಕೆ ನಿರೂಪಿಸಿದರು. ಯೂತ್ ರೆಡ್‌ಕ್ರಾಸ್ ಸಂಚಾಲಕರಾದ ಪ್ರಶಾಂತ್ ಎನ್. ಸಹಕರಿಸಿದರು. ಒಟ್ಟು 115 ಯೂನಿಟ್‌ಗಳ ರಕ್ತ ಸಂಗ್ರಹಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!