Thursday, February 27, 2025
Thursday, February 27, 2025

ಭಾಷೆಗಳ ನಡುವೆ ಬಾಂಧವ್ಯ ಬೆಳೆಯಬೇಕು: ಡಾ. ಮಹಾಬಲೇಶ್ವರ ರಾವ್

ಭಾಷೆಗಳ ನಡುವೆ ಬಾಂಧವ್ಯ ಬೆಳೆಯಬೇಕು: ಡಾ. ಮಹಾಬಲೇಶ್ವರ ರಾವ್

Date:

ಉಡುಪಿ, ಜ.28: ಭಾಷೆಯಲ್ಲಿ ಮೇಲು, ಕೀಳು ಎಂಬ ಭಾವನೆ ಸಲ್ಲ. ನೆರೆಹೊರೆಯ ಭಾಷೆಗಳನ್ನು ಕಲಿಯಬೇಕು. ಭಾಷೆಗಳ ನಡುವೆ ಬಾಂಧವ್ಯ ಬೆಳೆಯಬೇಕು ಎಂದು ಶಿಕ್ಷಣ ತಜ್ಞ ಡಾ ಮಹಾಬಲೇಶ್ವರ ರಾವ್ ಹೇಳಿದರು.

ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಹಾಗೂ ಕೇರಳ ಕಲ್ಚರಲ್ ಆ್ಯಂಡ್ ಸೋಶಿಯಲ್ ಸೆಂಟರ್ ಆಶ್ರಯದಲ್ಲಿ ಶನಿವಾರ ಮಣಿಪಾಲದ ಸೋನಿಯಾ ಕ್ಲಿನಿಕ್ ಸಭಾಂಗಣದಲ್ಲಿ ಜರಗಿದ ’ಕನ್ನಡ ಮಾತನಾಡು’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನೆರೆ ಹೊರೆಯವರಿಂದ ಭಾಷೆ ಕೊಡುಕೊಳ್ಳುವಿಕೆಯಾಗಬೇಕು. ಇದು ಹಿಂದಿನಿಂದ ನಡೆದು ಕೊಂಡು ಬಂದಿಲ್ಲ. ಭಾಷೆಗಳ ಜತೆಗೆ ನೆಲದ ಸಂಸ್ಕೃತಿ ಬಗ್ಗೆಯೂ ಅರಿಯಬೇಕು. ಭಾಷೆ ಒಂದು ಅಂಶವಾಗಿದ್ದು ಸಂಸ್ಕೃತಿಯು ಅದರ ಮೂಲವಾಗಿದೆ. ವ್ಯಾಕರಣದ ಮೂಲಕ ಭಾಷೆಯನ್ನು ಕಲಿಸುವ ಬದಲು ಸಂವಹನ ಮತ್ತು ಸನ್ನಿವೇಶಗಳ ಆಧರಿತವಾಗಿ ಭಾಷೆಯನ್ನು ಕಲಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು. ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದಿಂದ ನಡೆಯುತ್ತಿರುವ ಈ ಕಾರ್ಯಕ್ರಮ ಅರ್ಥಪೂರ್ಣ ಎಂದು ಬಣ್ಣಿಸಿದರು.

ಸಾಹಿತಿ ಡಾ. ಗಣನಾಥ ಎಕ್ಕಾರು ಶುಭ ಹಾರೈಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಉಡುಪಿ ಜಿಲ್ಲಾ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್, ಕೇರಳ ಕಲ್ಚರಲ್ ಸೋಶಿಯಲ್ ಸೆಂಟರ್ ಕಾರ್ಯದರ್ಶಿ ಬಿನೇಶ್ ಹಾಗೂ ಸದಸ್ಯರಾದ ಮೋಹನ್ ರಾವ್, ಥಾಮಸ್ ಉಪಸ್ಥಿತರಿದ್ದರು. ಘಟಕದ ಅಧ್ಯಕ್ಷ ರವಿರಾಜ್ ಹೆಚ್.ಪಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು ವಂದಿಸಿ, ರಾಜೇಶ್ ಪಣಿಯಾಡಿ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

51 ವಯಸ್ಸಿನಲ್ಲೂ ಸ್ಪೋಟಕ ಆಟ; ಗತ ವೈಭವ ನೆನಪಿಸಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್

ಮುಂಬಯಿ, ಫೆ.26: ಮಂಗಳವಾರ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ...

ಮಹಾಕುಂಭ ವೈಭವ- 45 ದಿನಗಳಲ್ಲಿ 65 ಕೋಟಿಗೂ ಹೆಚ್ಚು ಭಕ್ತರು, 3 ಲಕ್ಷ ಕೋಟಿ ರೂ. ಆದಾಯ

ಪ್ರಯಾಗರಾಜ್, ಫೆ.26: ಬುಧವಾರ ಮಹಾಶಿವರಾತ್ರಿಯಂದು ಸಂಪನ್ನಗೊಂಡ ಮಹಾಕುಂಭಮೇಳ ಕಳೆದ 45 ದಿನಗಳಲ್ಲಿ...

ಜೆಇಇ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಫಲಿತಾಂಶ: ಕ್ರಿಯೇಟಿವ್ ಸಾಧನೆ

ಉಡುಪಿ, ಫೆ.26: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ...

ಪರೀಕ್ಷಾ ತರಬೇತಿ

ಕುಂದಾಪುರ, ಫೆ.26: ಜೆಸಿಐ ಶಂಕರನಾರಾಯಣ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಶಂಕರನಾರಾಯಣ...
error: Content is protected !!