ಉಡುಪಿ, ಜ.31: ಐ.ಟಿ.ಡಿ.ಪಿ ಇಲಾಖೆಯ ಡಾ. ಬಿ.ಆರ್. ಅಂಬೇಡ್ಕರ್ ನಿವಾಸ ಯೋಜನೆಯ ನಗರ ಯೋಜನೆಯಡಿ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ ಕೊರಗ ಜನಾಂಗದವರಿಗೆ ಹೊಸ ಮನೆ ನಿರ್ಮಿಸಲು 4 ಲಕ್ಷ ರೂಪಾಯಿ ಸಹಾಯಧನ ನೀಡಲಾಗುತ್ತಿದ್ದು, ಜೊತೆಗೆ ವಾಜಪೇಯಿ ನಗರ ವಸತಿ ಯೋಜನೆಯಡಿ ನಗರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಸಾಮಾನ್ಯ ವರ್ಗದವರಿಗೆ ಹೊಸ ಮನೆ ನಿರ್ಮಿಸಲು 1.20 ಲಕ್ಷ ರೂಪಾಯಿ ಸಹಾಯಧನ ನೀಡಲಾಗುತ್ತಿದ್ದು, ಫಲಾನುಭವಿಗಳಿಗೆ ಹೊಸ ಮನೆ ನಿರ್ಮಾಣ ಮಾಡಲು ಮನೆ ಮಂಜೂರಾತಿ ಮತ್ತು ಕಾಮಗಾರಿ ಆದೇಶ ಪತ್ರದ ವಿತರಣಾ ಕಾರ್ಯಕ್ರಮ ಮಂಗಳವಾರ ಉಡುಪಿ ನಗರಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಭವನದಲ್ಲಿ ನಡೆಯಿತು.
ಶಾಸಕ ಕೆ. ರಘುಪತಿ ಭಟ್ ಆದೇಶ ಪತ್ರ ವಿತರಿಸಿದರು. ಉಡುಪಿ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ ಮತ್ತು ನಗರ ಸಭೆಯ ಪೌರಾಯುಕ್ತರಾದ ಉದಯ್ ಶೆಟ್ಟಿ ಉಪಸ್ಥಿತರಿದ್ದರು.