Monday, January 20, 2025
Monday, January 20, 2025

ಯಕ್ಷಗಾನ ಸಮ್ಮೇಳನಕ್ಕೆ ಅಗತ್ಯ ಸಿದ್ಧತೆ: ಡಾ.ಜಿ.ಎಲ್.ಹೆಗಡೆ

ಯಕ್ಷಗಾನ ಸಮ್ಮೇಳನಕ್ಕೆ ಅಗತ್ಯ ಸಿದ್ಧತೆ: ಡಾ.ಜಿ.ಎಲ್.ಹೆಗಡೆ

Date:

ಉಡುಪಿ, ಜ. 31: ಯಕ್ಷಗಾನ ವಿದ್ವಾಂಸ ಹಾಗೂ ಸಂಶೋಧಕ ಡಾ.ಎಂ.ಪ್ರಭಾಕರ ಜೋಶಿ ಅವರ ಅಧ್ಯಕ್ಷತೆಯಲ್ಲಿ ಫೆಬ್ರವರಿ 11 ಮತ್ತು 12 ರಂದು ಉಡುಪಿಯ ಎಂ.ಜಿ.ಎಂ ಕ್ರೀಡಾಂಗಣದಲ್ಲಿ ನಡೆಯುವ ಪ್ರಥಮ ಯಕ್ಷಗಾನ ಸಮ್ಮೇಳನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಸಮ್ಮೇಳನದ ಕಾರ್ಯಾಧ್ಯಕ್ಷ ಡಾ.ಜಿ.ಎಲ್.ಹೆಗಡೆ ಹೇಳಿದರು. ಅವರು ನಗರದ ಎಂ.ಜಿ.ಎಂ. ಕಾಲೇಜಿನ ರವೀಂದ್ರ ಮಂಟಪದಲ್ಲಿ ಯಕ್ಷಗಾನ ಸಮ್ಮೇಳನದ ಪೂರ್ವಭಾವಿ ತಯಾರಿಯ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದರು.

ಯಕ್ಷಗಾನ ಸಮ್ಮೇಳನವು ಸಾಹಿತ್ಯ ಸಮ್ಮೇಳನದ ಮಾದರಿಯಲ್ಲಿ ಅದ್ಧೂರಿ ಮೆರವಣಿಗೆಯೊಂದಿಗೆ ಪ್ರಾರಂಭವಾಗಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಚಿವರು, ಶಾಸಕರು ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದರು. ಸಮ್ಮೇಳನದಲ್ಲಿ ಎರಡು ದಿನ ಗೋಷ್ಠಿ, ಸನ್ಮಾನ, ಹಾಗೂ ಯಕ್ಷಗಾನ ಪ್ರದರ್ಶನ ನಡೆಯಲಿದ್ದು, ಸಮ್ಮೇಳನದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರಿಗೂ ಎರಡು ದಿನ ಊಟ, ಉಪಾಹಾರದ ವ್ಯವಸ್ಥೆಯನ್ನು ಮಾಡಲಾಗುವುದು ಎಂದರು.

ಯಕ್ಷಗಾನಕ್ಕೆ ಸಂಬಂಧಿಸಿದ ಕರಕುಶಲ ವಸ್ತುಗಳು, ವೇಷಭೂಷಣ, ವಾದ್ಯ ಪರಿಕರ ಹಾಗೂ ಪುಸ್ತಕಗಳ ಮಳಿಗೆಗಳು ಸಮ್ಮೇಳನದ ಪ್ರಧಾನ ಆಕರ್ಷಣೆಯಾಗಲಿದೆ. ಯಕ್ಷಗಾನ ಕಲಾಸಕ್ತರಿಗೆ ಅಪರೂಪದ ಮತ್ತು ಐತಿಹಾಸಿಕ ಸಮ್ಮೇಳನವಾಗಿ ಸಂಭ್ರಮಿಸುವ ಅಭೂತಪೂರ್ವ ಅವಕಾಶವನ್ನು ಕಲ್ಪಿಸುವ ನಿಟ್ಟಿನಲ್ಲಿ ಸಂಘಟನಾ ಸಮಿತಿಯ ಸದಸ್ಯರು ಶ್ರಮವಹಿಸಿ ಸಹಕರಿಸುವಂತೆ ತಿಳಿಸಿದರು.

ಸಭೆಯಲ್ಲಿ ಶಾಸಕ ಕೆ. ರಘುಪತಿ ಭಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಅಶೋಕ ಛಲವಾದಿ ಹಾಗೂ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಯಕ್ಷಗಾನ ಅಕಾಡೆಮಿಯ ರಿಜಿಸ್ಟ್ರಾರ್ ಶಿವರುದ್ರಪ್ಪ, ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ.ಎಂ.ಎಲ್.ಸಾಮಗ, ಸಮ್ಮೇಳನದ ಪ್ರಧಾನ ಸಂಚಾಲಕ ಕಿಶನಕುಮಾರ್ ಹೆಗಡೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಸಂಚಾಲಕ ಮುರಳಿ ಕಡೆಕಾರ್ ಸಮ್ಮೇಳನದ ರೂಪುರೇಷೆಗಳನ್ನು ಮಂಡಿಸಿದರು. ನಾರಾಯಣ ಎಂ.ಹೆಗಡೆ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!