Sunday, November 24, 2024
Sunday, November 24, 2024

ಹಿರಿಯ ನಾಗರಿಕರಿಗೆ ದೊರಕುವ ಸೌಲಭ್ಯಗಳ ಕುರಿತ ಮಾಹಿತಿ ಕಾರ್ಯಕ್ರಮ

ಹಿರಿಯ ನಾಗರಿಕರಿಗೆ ದೊರಕುವ ಸೌಲಭ್ಯಗಳ ಕುರಿತ ಮಾಹಿತಿ ಕಾರ್ಯಕ್ರಮ

Date:

ಉಡುಪಿ, ಫೆ. 3: ವೃದ್ಧಾಪ್ಯವು ಪ್ರಕೃತಿ ಸಹಜ ಪ್ರಕ್ರಿಯೆಯಾಗಿದ್ದು, ಹಿರಿಯ ನಾಗರಿಕರನ್ನು ಕಡೆಗಣಿಸದೇ ಅವರ ಸಂಧ್ಯಾ ಕಾಲದಲ್ಲಿ ಹೊಂದಾಣಿಕೆಯ ಜೀವನ ನಡೆಸುವುದು ಅತ್ಯವಶ್ಯಕವಾಗಿದೆ ಎಂದು ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಯೋಜನಾ ಸಂಯೋಜಕಿ ಅಶ್ವಿನಿ ಹೇಳಿದರು. ಅವರು ಬಡಾನಿಡಿಯೂರು ಗ್ರಾಮ ಪಂಚಾಯತ್‌ನಲ್ಲಿ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಇವರ ವತಿಯಿಂದ ನಡೆದ ಅರಿವಿನ ಸಿಂಚನ ಕಾರ್ಯಕ್ರಮದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರಿಗೆ ಸರಕಾರದಿಂದ ದೊರಕುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿ, ಮಾತನಾಡಿದರು.

ಹಿರಿಯ ನಾಗರಿಕರು ತುರ್ತು ಸಂದರ್ಭದಲ್ಲಿ ದೂರವಾಣಿ ಸಂಖ್ಯೆ 0820-2526394 ಗೆ ಕರೆ ಮಾಡಿ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದ ಅವರು, ಹಿರಿಯರ ನಿರ್ವಹಣೆ, ಮಕ್ಕಳು, ವಾರೀಸುದಾರರು ಆರೈಕೆ ಮಾಡಿಕೊಳ್ಳದಿದ್ದಲ್ಲಿ ಎ.ಸಿ. ಕೋರ್ಟಿಗೆ ಅರ್ಜಿ ಸಲ್ಲಿಸಿ ನ್ಯಾಯ ಪಡೆಯಬಹುದು. ಹಿರಿಯ ನಾಗರಿಕರ ಗುರುತಿನ ಚೀಟಿ ಮತ್ತು ವೃದ್ಧಾಪ್ಯ ವೇತನಗಳ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಯೋಜನೆಗಳ ಸವಲತ್ತುಗಳನ್ನು ಪಡೆದುಕೊಳ್ಳುವಂತೆ ತಿಳಿಸಿದರು. ಗ್ರಾಮ ಪಂಚಾಯತ್ ಸದಸ್ಯೆ ಯಶೋಧ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಾಲತಿ, ಗ್ರಾಮ ಲೆಕ್ಕಿಗರಾದ ಪವಿತ್ರ, ಪಂಚಾಯತ್ ಸಿಬ್ಬಂದಿಗಳು, ವಿಕಲಚೇತನರ ಸಬಲೀಕರಣ ಇಲಾಖೆಯ ತಾಲೂಕು ಸಂಯೋಜಕ ಮಧುಸೂಧನ ರಾವ್, ವಿಕಲಚೇತನ ಹಾಗೂ ಹಿರಿಯ ನಾಗರಿಕ ಫಲಾನುಭವಿಗಳು ಹಾಗೂ ಮತ್ತಿತರರು ಭಾಗವಹಿಸಿದ್ದರು. ಕಾರ್ಯದರ್ಶಿ ಗುರುರಾಜ್ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಮಹಾರಾಷ್ಟ್ರದ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ನ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವು ಉತ್ತಮ...
error: Content is protected !!