ಉಡುಪಿ, ಫೆ. 6: ಉಡುಪಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಲಯನ್ಸ್ ಕ್ಲಬ್ ವತಿಯಿಂದ ಸುಮಾರು ಐವತ್ತು ಸಾವಿರ ರೂಪಾಯಿ ಮೊತ್ತದ ವಾಷ್ ಬೇಸಿನ್ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿಲ್ಲಾ ರಾಜ್ಯಪಾಲ ಡಾ. ಎಂ. ಕೆ. ಭಟ್ ಮಾತನಾಡಿ, ಲಯನ್ಸ್ ನಂತಹ ಸಂಘ ಸಂಸ್ಥೆಗಳಿಂದ ಸಿಗುತ್ತಿರುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಸತತ ಅಧ್ಯಯನಶೀಲರಾಗಬೇಕು ಎಂದರು.
ಅಧ್ಯಕ್ಷರಾದ ದಿವಾಕರ್ ಶೆಟ್ಟಿ, ಕಾರ್ಯದರ್ಶಿ ರವಿರಾಜ್ ಯು ಎಸ್., ಕಟ್ಟಡ ಸಮಿತಿಯ ಕಾರ್ಯಾಧ್ಯಕ್ಷ ರಾಜಗೋಪಾಲ್ ಮತ್ತು ಲಯನ್ಸ್ ಕ್ಲಬ್ ಸದಸ್ಯರು, ಶಾಲೆಯ ಎಸ್.ಡಿ.ಎಂ.ಸಿ ಗೌರವಾಧ್ಯಕ್ಷೆ ತಾರಾದೇವಿ, ನಿವೃತ್ತ ಶಿಕ್ಷಕಿ ಜಯಲಕ್ಷ್ಮಿ, ಬೋಧಕರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಇಂದಿರಾ ವಂದಿಸಿದರು.