Saturday, February 7, 2026
Saturday, February 7, 2026

ಗ್ರಾ.ಪಂ. ಉಪಚುನಾವಣೆ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಸಂತೆ, ಜಾತ್ರೆ ನಿಷೇಧ

ಗ್ರಾ.ಪಂ. ಉಪಚುನಾವಣೆ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಸಂತೆ, ಜಾತ್ರೆ ನಿಷೇಧ

Date:

ಉಡುಪಿ: ಗ್ರಾಮ ಪಂಚಾಯತ್ ಉಪ ಚುನಾವಣೆ-2021 ಕ್ಕೆ ಸಂಬಂಧಿಸಿದಂತೆ, ಡಿಸೆಂಬರ್ 27 ರಂದು ಬ್ರಹ್ಮಾವರ ತಾಲೂಕಿನ ನಾಲ್ಕೂರು, ಕಾಪು ತಾಲೂಕಿನ ಕೋಟೆ ಹಾಗೂ ಉಡುಪಿ ತಾಲೂಕಿನ ತೋನ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಮತದಾನ ನಡೆಯಲಿರುವ ಹಿನ್ನೆಲೆ, ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಹಾಗೂ ಸಾರ್ವಜನಿಕರು ಮತ ಚಲಾಯಿಸಲು ಅನುಕೂಲವಾಗುವಂತೆ, ಚುನಾವಣೆ ನಡೆಯುವ ದಿನದಂದು ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಕಾಪು ಪುರಸಭಾ ವ್ಯಾಪ್ತಿಯಲ್ಲಿ ಸಂತೆ, ಜಾತ್ರೆ ನಿಷೇಧ: ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ-2021 ಕ್ಕೆ ಸಂಬಂಧಿಸಿದಂತೆ, ಜಿಲ್ಲೆಯ ಕಾಪು ಪುರಸಭಾ ವ್ಯಾಪ್ತಿಯಲ್ಲಿ ಡಿಸೆಂಬರ್ 27 ರಂದು ಮತದಾನ ನಡೆಯಲಿರುವ ಹಿನ್ನೆಲೆ, ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಹಾಗೂ ಸಾರ್ವಜನಿಕರು ಮತ ಚಲಾಯಿಸಲು ಅನುಕೂಲವಾಗುವಂತೆ, ಕಾಪು ಪುರಸಭಾ ವ್ಯಾಪ್ತಿಯಲ್ಲಿ ಚುನಾವಣಾ ದಿನದಂದು ನಡೆಯುವ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!