ಉಡುಪಿ, ಫೆ. 11: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ ಅಕಾಡೆಮಿ, ಬೆಂಗಳೂರು, ಜಿಲ್ಲಾಡಳಿತ, ಉಡುಪಿ ಜಿಲ್ಲೆ ವತಿಯಿಂದ ರಾಜ್ಯ ಮಟ್ಟದ “ಸಮಗ್ರ ಯಕ್ಷಗಾನ ಸಮ್ಮೇಳನ – 2023” ಇದರ ಉದ್ಘಾಟನಾ ಕಾರ್ಯಕ್ರಮ ಶನಿವಾರ ಎಂ.ಜಿ.ಎಂ ಮೈದಾನದಲ್ಲಿ ನಡೆಯಿತು. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯಸಚಿವರಾದ ಶೋಭಾ ಕರಂದ್ಲಾಜೆ ಅವರು ಉದ್ಘಾಟನೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಕರಾವಳಿ ಜನರ ಜೀವನಾಡಿಯಾಗಿರುವ ಯಕ್ಷಗಾನ ಜಗತ್ತಿನಾದ್ಯಂತ ಜನರನ್ನು ಆಕರ್ಷಿಸುತ್ತಿದೆ. ಸಂಸ್ಕೃತಿಯೊಂದಿಗೆ ಯಕ್ಷಗಾನ ಅವಿನಾಭಾವ ಸಂಬಂಧ ಹೊಂದಿದೆ ಎಂದರು.
ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನೀಲ್ ಕುಮಾರ್, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ, ಸಮಗ್ರ ಯಕ್ಷಗಾನ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರು ಶಾಸಕ ಕೆ. ರಘುಪತಿ ಭಟ್, ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷರಾದ ಉದಯಕುಮಾರ್ ಶೆಟ್ಟಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಸನ್ನ ಎಚ್., ನಗರಸಭಾ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಮಾಹೆ ಮಣಿಪಾಲದ ಸಹ ಕುಲಾಧಿಪತಿಗಳಾದ ಎಚ್.ಎಸ್ ಬಲ್ಲಾಳ್, ಸಮಗ್ರ ಯಕ್ಷಗಾನ ಸಮ್ಮೇಳನದ ಅಧ್ಯಕ್ಷರಾದ ಡಾ. ಎಂ. ಪ್ರಭಾಕರ್ ಜೋಶಿ, ಕಾರ್ಯಾಧ್ಯಕ್ಷರಾದ ಜಿ.ಎಲ್ ಹೆಗ್ಡೆ, ಪ್ರಧಾನ ಸಂಚಾಲಕರಾದ ಮುರಳಿ ಕಡೆಕಾರ್, ಪಿ. ಕಿಶನ್ ಹೆಗ್ಡೆ, ಗುರ್ಮೆ ಫೌಂಡೇಶನ್ ನ ಗುರ್ಮೆ ಸುರೇಶ್ ಶೆಟ್ಟಿ, ಉದ್ಯಮಿ ಪುರುಶೋತ್ತಮ್ ಶೆಟ್ಟಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಸುರೇಂದ್ರ ಅಡಿಗ ನೀಲಾವರ, ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಎಂ.ಎಲ್ ಸಾಮಗ ಮತ್ತು ಉಡುಪಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು, ಮುಂತಾದವರು ಉಪಸ್ಥಿತರಿದ್ದರು.