Sunday, January 19, 2025
Sunday, January 19, 2025

ಸಮಗ್ರ ಕೃಷಿ ನೀತಿಯಿಂದ ಯಶಸ್ಸು ಸಾಧ್ಯ: ರಾಜೇಶ್ ಕಾಂಚನ್

ಸಮಗ್ರ ಕೃಷಿ ನೀತಿಯಿಂದ ಯಶಸ್ಸು ಸಾಧ್ಯ: ರಾಜೇಶ್ ಕಾಂಚನ್

Date:

ಕೋಟ: ನಮ್ಮನ್ನು ಆಳುವವರು ರೈತರ ಸಮಸ್ಯೆ ಆಲಿಸುವುದಿಲ್ಲ, ರೈತ ಬೆಳೆದ ಬೆಳೆಗೆ ಸಮರ್ಪಕ ದರ ನಿಗದಿಪಡಿಸಿಲ್ಲ ಇದರಿಂದ ರೈತ ಸಮುದಾಯ ಉಳಿಯಲು ಸಾಧ್ಯವೇ ಎಂದು ಯುವ ಸಾಧಕ ಕೃಷಿಕ ರಾಜೇಶ್ ಕಾಂಚನ್ ಕೊರವಡಿ ಪ್ರಶ್ನಿಸಿದ್ದಾರೆ.

ಅವರು ಕೋಟದ ಪಂಚವರ್ಣ ಯುವಕ ಮಂಡಲ ಕೋಟ ಇವರ ನೇತೃತ್ವದಲ್ಲಿ ರೈತಧ್ವನಿ ಸಂಘ ಕೋಟ, ಗಿಳಿಯಾರು ಯುವಕ ಮಂಡಲ ಗಿಳಿಯಾರು, ಗೀತಾನಂದ ಫೌಂಡೇಶನ್ ಮಣೂರು, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಮಣೂರು ಫ್ರೆಂಡ್ಸ್ ಮಣೂರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಇವರುಗಳ ಸಹಯೋಗದೊಂದಿಗೆ 12ನೇ ಸರಣಿ ಮಾಲಿಕೆ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಬೇಳೂರಿನ ಯುವ ಸಾಧಕಿ ಕೃಷಿಕೆ ನಿಶಾ ದೇವಡಿಗ ಇವರನ್ನು ಗೌರವಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಮಗ್ರ ಕೃಷಿ ಪದ್ದತಿಯಿಂದ ಯಶಸ್ಸು ಸಾಧ್ಯ. ಈ ನಿಟ್ಟಿನಲ್ಲಿ ಯುವ ಸಮುದಾಯ ಹೆಚ್ಚು ಹೆಚ್ಚು ಕೃಷಿ ಕಾಯಕದಲ್ಲಿ ತೊಡಗಿಸಿಕೊಳ್ಳುವಂತ್ತಾಗಬೇಕು, ಆ ಮೂಲಕ ರೈತ ಪ್ರದಾನ ದೇಶ ಎಂಬುವುದನ್ನು ಮತ್ತೊಮ್ಮೆ ಸಾಬೀತುಪಡಿಸಬೇಕಿದೆ ಎಂದರು.

ಪ್ರಸ್ತುತ ಕಾಲಘಟ್ಟದಲ್ಲಿ ರೈತ ಬೆಳೆದ ಯಾವುದೇ ಬೆಳೆಗೂ ಸರಕಾರ ನಿಗದಿತ ನಿರ್ದಿಷ್ಟ ದರ ನಿಗದಿಪಡಿಸಬೇಕು. ತನ್ಮೂಲಕ ರೈತನಿಗೆ ನೈತಿಕವಾಗಿ ಬೆಂಬಲ ಸೂಚಿಸಬೇಕು ಎಂದು ಆಗ್ರಹಿಸಿದರು.

ಕಾರ್ಯಕ್ರಮದಲ್ಲಿ ಕೋಟ ರೈತಧ್ವನಿ ಸಂಘದ ಅಧ್ಯಕ್ಷ ಎಂ.ಜಯರಾಮ್ ಶೆಟ್ಟಿ ಮಾತನಾಡಿ, ಸರಕಾರ ನೀಡುವ ರಾಜ್ಯೋತ್ಸವ ಪ್ರಶಸ್ತಿ ಕೃಷಿ ಕ್ಷೇತ್ರಕ್ಕೆ ಇಲ್ಲ ಯಾಕೆ, ರೈತ ಸಮುದಾಯ ಇದರಿಂದ ವಂಚಿತಗೊಂಡ ಬಗ್ಗೆ ಖೇದ ವ್ಯಕ್ತಪಡಿಸಿ ರಾಜ್ಯ ಹಾಗೂ ಕೇಂದ್ರ ಕೃಷಿ ಕ್ಷೇತ್ರವನ್ನು ಪ್ರದಾನವನ್ನಾಗಿಸಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಅದ್ಯತೆ ನೀಡಬೇಕು.

ಇತ್ತೀಚಿಗಿನ ದಿನ ಕೃಷಿ ಲಾಭದಾಯಕವಾಗಿಸಲು ಹಲವು ರೀತಿಯ ವಿನೂತನ ಆಧುನಿಕ ಪದ್ದತಿಯನ್ನು ಅನುಸರಿಸಿಕೊಳ್ಳಬೇಕು, ಆಗ ಮಾತ್ರ ಯಶಸ್ಸು ಕಾಣಲು ಸಾಧ್ಯ. ಇದಕ್ಕೆ ನಿಶಾ ದೇವಾಡಿಗ ಎಂಬ ಯುವ ಪ್ರತಿಭೆಯೇ ಸಾಕ್ಷಿ ಎಂದು ಅಭಿಪ್ರಾಯಪಟ್ಟರು.

ರೈತ ಯುವ ಸಾಧಕಿ ಬೇಳೂರು ನಿಶಾ ದೇವಾಡಿಗ ಇವರನ್ನು ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ ಅವರು, ತಂದೆಯ ನಿಧನದ ನಂತರ ಕೃಷಿ ಕಾಯಕಕ್ಕೆ ಧುಮುಕಿದ್ದೇನೆ.

ಶೈಕ್ಷಣಿಕ ನಡುವೆಯೂ ಕೃಷಿ ಕಾಯಕದಲ್ಲಿ ಪಳಗಿದ್ದೇನೆ, ಇದಕ್ಕೆ ತಾಯಿಯ ಪ್ರೇರಣೆ ಗ್ರಾಮಸ್ಥರ ಸಹಕಾರವು ಅಡಗಿದೆ. ಯುವ ಸಮುದಾಯ ಹೆಚ್ಚು ಹೆಚ್ಚು ಕೃಷಿ ಕಾಯಕದಲ್ಲಿ ತೊಡಗಿಕೊಳ್ಳಬೇಕು ಎಂದರು.

ಸಭೆಯ ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಮೃತ್ ಜೋಗಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೇಳೂರು ಪರಿಸರದ ಸಾಮಾಜಿಕ ಕಾರ್ಯಕರ್ತ ಸತೀಶ್ ಶೆಟ್ಟಿ ಗುಳ್ಳಾಡಿ, ಪಾಂಡೇಶ್ವರ ರಕ್ತೇಶ್ವರಿ ದೇವಳದ ಧರ್ಮದರ್ಶಿ ಕೆ.ವಿ ರಮೇಶ್ ರಾವ್, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಭಾಸ್ಕರ್ ಶೆಟ್ಟಿ ಮಣೂರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಅಧ್ಯಕ್ಷ ಶ್ರೀಕಾಂತ್ ಶೆಣೈ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಇದರ ಭಾರತಿ ಮಯ್ಯ, ಮಣೂರು ಫ್ರೆಂಡ್ಸ್ ಅಧ್ಯಕ್ಷ ದಿನೇಶ್ ಆಚಾರ್ಯ, ಗಿಳಿಯಾರು ಯುವಕ ಮಂಡಲದ ಗೌರವ ಸಲಹೆಗಾರ ರಾಘವೇಂದ್ರ ಕುಂದರ್ ಮತ್ತಿತರರು ಉಪಸ್ಥಿತರಿದ್ದರು.

ವಿಪ್ರ ಮಹಿಳಾ ಬಳಗದ ಸುಜಾತ ಬಾಯಿರಿ ಸ್ವಾಗತಿಸಿ ಪ್ರಾಸ್ತಾವಿಸಿದರು. ಪಂಚವರ್ಣ ಯುವಕ ಮಂಡಲದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!