Tuesday, January 21, 2025
Tuesday, January 21, 2025

ಜಿಲ್ಲಾಮಟ್ಟದ ತರಬೇತುದಾರರ ತರಬೇತಿ ಕಾರ್ಯಾಗಾರ

ಜಿಲ್ಲಾಮಟ್ಟದ ತರಬೇತುದಾರರ ತರಬೇತಿ ಕಾರ್ಯಾಗಾರ

Date:

ಉಡುಪಿ, ಫೆ. 16: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ, ಕೆ.ಎಚ್.ಪಿ.ಟಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ತರಬೇತುದಾರರ ತರಬೇತಿ ಕಾರ್ಯಾಗಾರ ನಡೆಯಿತು.

ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ನವೀನ್ ಕಾರ್ಯಕ್ರಮ ಉದ್ಘಾಟಿಸಿ, ಗ್ರಾಮ ಪಂಚಾಯತ್ ಮಟ್ಟದಲ್ಲಿ ಸ್ಥಳೀಯ ಆರೋಗ್ಯ ಸೇವೆ ಹಾಗೂ ಅಗತ್ಯ ಸೌಲಭ್ಯ ಒದಗಿಸುವುದು ಶ್ಲಾಘನೀಯ ಎಂದರು. ಉಡುಪಿ ತಾಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿ ವಿಜಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ತಾಲೂಕು ಆರೋಗ್ಯಾಧಿಕಾರಿ ವಾಸುದೇವ, ಬ್ರಹ್ಮಾವರ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಹೆಚ್ ವಿ ಇಬ್ರಾಹಿಂಪುರ, ಕೆ.ಹೆಚ್.ಪಿ.ಟಿ ಯ ವಲಯ ಮುಖ್ಯಸ್ಥ ಶಶಿಧರನ್, ಮೈಸೂರು ಜಿಲ್ಲಾ ಸಂಯೋಜಕ ನಾಗೇಂದ್ರ ಸ್ವಾಮಿ, ಉಮೇಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಯೋಜನೆಯ ಕೈಪಿಡಿಯನ್ನು ಹಾಗೂ ಪ್ಲಿಪ್ ಚಾರ್ಟ್ ಬಿಡುಗಡೆ ಮಾಡಲಾಯಿತು. ತಾಲೂಕು ಸಂಯೋಜಕಿ ಅರ್ಪಿತಾ ಬ್ರಹ್ಮಾವರ ಸ್ವಾಗತಿಸಿ, ಜಿಲ್ಲಾ ಸಂಯೋಜಕ ಪ್ರಸಾದ್ ನಿರೂಪಿಸಿ, ಪ್ರಸಾದ್ ವಂದಿಸಿದರು. ಜಿಲ್ಲೆಯ ಎಲ್ಲಾ ತಾಲೂಕು ಸಂಪನ್ಮೂಲ ವ್ಯಕ್ತಿಗಳು ಹಾಗೂ ಕೆ.ಎಚ್.ಪಿ.ಟಿ ಜಿಲ್ಲಾ ಸಂಯೋಜಕರು ಹಾಗೂ ಎಲ್ಲ ತಾಲೂಕು ಸಂಯೋಜಕರು ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!