ಉಡುಪಿ, ಫೆ. 17: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ಜನಸಾಮಾನ್ಯರ ನಿರೀಕ್ಷೆಗೆ ಪೂರಕವಾದ ಬಜೆಟ್ ಮಂಡಿಸಿದ್ದಾರೆ. ರೈತರಿಗೆ ಶೂನ್ಯ ಬಡ್ಡಿದರದ ಸಾಲ ಯೋಜನೆ 5 ಲಕ್ಷಕ್ಕೆ ಏರಿಕೆ, ಮೀನುಗಾರಿಕೆ ನಾಡದೋಣಿಗಳಿಗೆ ಪೆಟ್ರೋಲ್ ಎಂಜಿನ್ ಅಳವಡಿಕೆಗೆ 50 ಸಾವಿರ ಸಹಾಯಧನ, ಬೈಂದೂರಿನಲ್ಲಿ ಸೀಫುಡ್ ಪಾರ್ಕ್ ನಿರ್ಮಾಣಕ್ಕೆ ಅನುದಾನ, ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್, ಮಹಿಳಾ ಸ್ವ ಸಹಾಯ ಸಂಘಗಳ ಶೂನ್ಯ ಬಡ್ಡಿದರಲ್ಲಿ ಸಾಲ ಯೋಜನೆಗೆ 1800 ಕೋಟಿ ಮೀಸಲು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಳ, ಸಾಗರ ಮಾಲಾ ಯೋಜನೆಯಡಿಯಲ್ಲಿ 12 ಕಿರುಬಂದರು ಅಭಿವೃದ್ದಿಗೆ ಚಾಲನೆ ಮೊದಲಾದ ಹತ್ತು ಹಲವು ಕಾರ್ಯಕ್ರಮಗಳ ಮೂಲಕ ರಾಜ್ಯ ಸರಕಾರ ರಾಜ್ಯದ ಜನರಲ್ಲಿ ಬಿಜೆಪಿಯೇ ಭರವಸೆ ಎಂಬ ಧ್ಯೇಯದೊಂದಿಗೆ ಉತ್ತಮ ಬಜೆಟ್ ಮಂಡಿಸಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಬಜೆಟ್ ಬಗ್ಗೆ ಹೇಳಿಕೆ ನೀಡಿದ್ದಾರೆ.
ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕ ಜನಪರ ಬಜೆಟ್: ಯಶ್ಪಾಲ್ ಸುವರ್ಣ

ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕ ಜನಪರ ಬಜೆಟ್: ಯಶ್ಪಾಲ್ ಸುವರ್ಣ
Date: