ಉಡುಪಿ, ಫೆ. 17: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ, ನೆಹರೂ ಯುವ ಕೇಂದ್ರ ಉಡುಪಿ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಕೊಕ್ಕರ್ಣೆ ಇವರ ಸಹಯೋಗದಲ್ಲಿ ನೆಹರೂ ಯುವ ಕೇಂದ್ರದ ಪ್ರತಿನಿಧಿಗಳಿಗೆ ಹಾಗೂ ಶಾಲಾ ಮಕ್ಕಳಿಗೆ ಆರೋಗ್ಯದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವು ಕೊಕ್ಕರ್ಣೆ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಜಿಲ್ಲಾ ಯುವಜನ ಅಧಿಕಾರಿ ವಿಲ್ಫ್ರೆಡ್ ಡಿ ಸೋಜಾ ಕಾರ್ಯಕ್ರಮ ಉದ್ಘಾಟಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ ಸ್ವಚ್ಛತೆ, ಪೌಷ್ಠಿಕಾಂಶ ಆಹಾರ ಬಗ್ಗೆ, ರಕ್ತಹೀನತೆಗೆ ಕಾರಣ, ಮುಂಜಾಗ್ರತಾ ಕ್ರಮಗಳು ಹಾಗೂ ಸಾಂಕ್ರಾಮಿಕ ರೋಗಗಳ ಕುರಿತು ಮಾಹಿತಿ ನೀಡಿದರು.
ಕೊಕ್ಕರ್ಣೆ ವೈದ್ಯಾಧಿಕಾರಿ ಡಾ. ಸುರೇಶ್ ನಾಯಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಹಿರಿಯ ಪ್ರಾಥಮಿಕ ಸುರಕ್ಷಾಧಿಕಾರಿ ಸ್ವಾಗತಿಸಿ, ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ನಿರೂಪಿಸಿ, ಪ್ರಾಂಶುಪಾಲ ಪ್ರಕಾಶ್ ಶೆಟ್ಟಿ ವಂದಿಸಿದರು.