ಉಡುಪಿ, ಫೆ. ೨೧: ಉಡುಪಿ, ಜಿಲ್ಲಾ ಪಂಚಾಯತ್ ಉಡುಪಿ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ತಾಲ್ಲೂಕು ಪಂಚಾಯತ್ ಉಡುಪಿ, ಕುಂದಾಪುರ, ಕಾರ್ಕಳ, ಬೈಂದೂರು, ಬ್ರಹ್ಮಾವರ, ಹೆಬ್ರಿ, ಕಾಪು ಹಾಗೂ ಜಿಲ್ಲಾ ಲೀಡ್ ಬ್ಯಾಂಕ್ ಉಡುಪಿ ಇವರ ಸಹಯೋಗದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆಗೆ ಅರ್ಜಿ ಸಲ್ಲಿಸಿದ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರಿಗೆ ತಮ್ಮ ಉದ್ಯಮವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಾಲ ಸೌಲಭ್ಯ ಒದಗಿಸುವ ಉದ್ದೇಶದಿಂದ ಸ್ತ್ರೀ ಸಾಮರ್ಥ್ಯ ಯೋಜನೆಯ ಸಾಲ ಮೇಳ ಅಭಿಯಾನ ಹಾಗೂ ಎಫ್.ಎಸ್.ಎಸ್.ಎ.ಐ ಮತ್ತು ಜಿ.ಎಸ್.ಟಿ ಮಾಹಿತಿ ಹಾಗೂ ನೋಂದಣಿ ಅಭಿಯಾನ ಕಾರ್ಯಕ್ರಮ ಫೆಬ್ರವರಿ 22 ರಂದು ತಾಲ್ಲೂಕು ಪಂಚಾಯತ್ ಉಡುಪಿ, ಫೆ. 23 ತಾಲ್ಲೂಕು ಪಂಚಾಯತ್ ಕುಂದಾಪುರ, ಫೆ. 24 ರಂದು ತಾಲ್ಲೂಕು ಪಂಚಾಯತ್ ಕಾರ್ಕಳ ಇಲ್ಲಿ ಹಮ್ಮಿಕೊಳ್ಳಲಾಗಿದೆ. ಸಾಲಕ್ಕೆ ಸಂಬಂಧಿಸಿದ ವಯಕ್ತಿಕ ದಾಖಲೆಗಳು, ಸ್ವ ಸಹಾಯ ಗುಂಪಿನ ದಾಖಲೆಗಳೊಂದಿಗೆ ಗ್ರಾಮೀಣ ಭಾಗದ ಮಹಿಳೆಯರು ಈ ಅಭಿಯಾನ ದಲ್ಲಿ ಭಾಗವಹಿಸಿ ರಾಜ್ಯ ಸರಕಾರದ ಯೋಜನೆಯ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ತ್ರೀ ಸಾಮರ್ಥ್ಯ ಯೋಜನೆಯ ಸಾಲ ಮೇಳ
ಸ್ತ್ರೀ ಸಾಮರ್ಥ್ಯ ಯೋಜನೆಯ ಸಾಲ ಮೇಳ
Date: