Tuesday, January 21, 2025
Tuesday, January 21, 2025

ವಿ.ಕೆ.ಆರ್: ಯೋಗ ತರಬೇತಿ

ವಿ.ಕೆ.ಆರ್: ಯೋಗ ತರಬೇತಿ

Date:

ಉಡುಪಿ, ಫೆ. 23: ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್. ಆಚಾರ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ಕಾರ್ಯಗಾರ ನಡೆಯಿತು. ಆಯುಷ್ ಧಾಮ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸೋನಿ ಡಿಕೋಸ್ಟ ಮಾತನಾಡಿ, ಮನಸ್ಸು ಮತ್ತು ದೇಹವನ್ನು ಸರಿಯಾಗಿ ಒಂದೆಡೆ ಕೇಂದ್ರೀಕರಿಸಲು ಯೋಗ, ಧ್ಯಾನ ಮತ್ತು ಪ್ರಾಣಾಯಾಮಗಳು ಬಹಳ ಸಹಕಾರಿ. ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಇಂದಿನ ಒತ್ತಡದ ಬದುಕಿನ ನಡುವೆ ಒಂದಿಷ್ಟು ಹೊತ್ತು ಈ ಚಟುವಟಿಕೆಗಳಿಗೆ ಮೀಸಲಾಗಿರಿಸಿದಾಗ ಮಾನಸಿಕ ಸ್ಥಿರತೆ ಕಂಡುಕೊಳ್ಳಲು ಸಾಧ್ಯ ಎಂದರು.

ಜ್ಞಾಪಕ ಶಕ್ತಿ ಏಕಾಗ್ರತೆಯನ್ನು ಹೆಚ್ಚಿಸಿಕೊಳ್ಳುವಲ್ಲಿ ಸಹಕಾರಿಯಾಗಬಲ್ಲ ವಿವಿಧ ಆಸನಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ತೋರಿಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ವಹಿಸಿಕೊಂಡಿದ್ದರು. ಉಪಪ್ರಾಂಶುಪಾಲೆ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶುಭಾ ಕೆ. ಎನ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಾಯಕ ಮುಖ್ಯ ಶಿಕ್ಷಕ ಚಂದ್ರಶೇಖರ ಶೆಟ್ಟಿ ಮತ್ತು ಇತರ ಶಿಕ್ಷಕರು ಉಪಸ್ಥಿತರಿದ್ದರು. ಶಿಕ್ಷಕಿ ಆಶಾಲತಾ ಎಸ್‍. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!