ಕುಂದಾಪುರ, ಫೆ. 27: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಸಂಘದ ವತಿಯಿಂದ ‘ವೈಯಕ್ತಿಕ ಹಣಕಾಸು ನಿರ್ವಹಣೆ’ ವಿಷಯದ ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಎಮ್.ಎಸ್.ಎನ್. ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಮಂಗಳೂರು ಇದರ ಸಹಾಯಕ ಪ್ರಾಧ್ಯಾಪಕರಾದ ಡಾ. ಶರಣ್ ಕುಮಾರ್ ಶೆಟ್ಟಿ ಆಗಮಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಶುಭ ಹಾರೈಸಿದರು.
ಕಾರ್ಯಕ್ರಮ ಸಂಯೋಜಕರಾದ ರಾಜೇಶ್ ಶೆಟ್ಟಿ, ರಜತ್ ಬಂಗೇರ್ ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕರಾದ ರಾಜೇಶ್ ಶೆಟ್ಟಿ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ದೀಕ್ಷಾ ಪ್ರಾರ್ಥಿಸಿದರು. ಪಂಚಮಿ ವಂದಿಸಿ, ಪೂರ್ಣಿಮಾ ನಿರೂಪಿಸಿದರು.