ಉಡುಪಿ, ಫೆ. 27: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಮೈಸೂರು ಸಹಯೋಗದಲ್ಲಿ ಫೆಬ್ರವರಿ 19 ರಿಂದ 22 ರವರೆಗೆ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಅಥ್ಲೆಟಿಕ್ಸ್ ನ 17 ರ ವಯೋಮಾನದ ಬಾಲಕರ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10 ನೇ ತರಗತಿ ವಿದ್ಯಾರ್ಥಿ ಪ್ರಣಯ್ ಶೆಟ್ಟಿ ತ್ರಿವಿಧ ಜಿಗಿತದಲ್ಲಿ ದ್ವಿತೀಯ ಸ್ಥಾನ (12.87 ಮೀ) ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಕಾರ್ಕಳದ ಪ್ರಶಾಂತ್ ಹಾಗೂ ಸಾರಿಕ ಪಿ. ಶೆಟ್ಟಿ ದಂಪತಿಗಳ ಪುತ್ರ.
ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಅರುಣ್ ಕುಮಾರ್, ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ರೇಷ್ಮಾ ಸಾಲೀಸ್ ಹಾಗೂ ಕಿರಣ್ ಅವರು ತರಬೇತಿ ನೀಡಿರುತ್ತಾರೆ. ಪ್ರಣಯ್ ಶೆಟ್ಟಿ ಇವರಿಗೆ ಕಾರ್ಕಳ ಜ್ಞಾನಸುಧಾ ಸಂಸ್ಥೆಯಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು. ವಿಶೇಷ ಅತಿಥಿಯಾಗಿ ಡಯಟ್ ಉಡುಪಿ ಉಪಪ್ರಾಂಶುಪಾಲ ಡಾ. ಅಶೋಕ್ ಕಾಮತ್ ಉಪಸ್ಥಿತರಿದ್ದರು. ಪ್ರಣಯ್ ಶೆಟ್ಟಿಯವರ ಪೋಷಕರು, ಶಾಲಾ ಪ್ರಾಂಶುಪಾಲೆ ಉಷಾ ರಾವ್.ಯು., ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದಿನೇಶ್ ಎಂ ಕೊಡವೂರು, ಉಪ ಪ್ರಾಂಶುಪಾಲೆ ವಾಣಿ. ಕೆ., ಬೋಧ ಬೋಧಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಹ ಶಿಕ್ಷಕಿ ಪ್ರೀತಿ ಶೆಟ್ಟಿಗಾರ್ ನಿರೂಪಿಸಿ ವಂದಿಸಿದರು.