Sunday, September 22, 2024
Sunday, September 22, 2024

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ: ರಜತ ಮಹೋತ್ಸವ ಮನವಿ ಪತ್ರ ಬಿಡುಗಡೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ: ರಜತ ಮಹೋತ್ಸವ ಮನವಿ ಪತ್ರ ಬಿಡುಗಡೆ

Date:

ಉಡುಪಿ, ಫೆ. 28: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಮನವಿ ಪತ್ರವನ್ನು ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ ಸೋಮವಾರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿದರು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಜತ ಮಹೋತ್ಸವ ಆಚರಿಸುತ್ತಿದ್ದು, ಕಾರ್ಯಕ್ರಮದಂಗವಾಗಿ ಜಿಲ್ಲೆಯಾದ್ಯಂತ ವಿವಿಧ 25 ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಮುಖ್ಯವಾಗಿ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿ, ಕಟ್ಟಡ ಅಭಿವೃದ್ಧಿ ಸೇರಿದಂತೆ ವಿವಿಧ ಯೋಜನೆಗಳಿಗೆ ಸುಮಾರು 2 ಕೋ. ರೂ ಯೋಜನೆ ರೂಪಿಸಲಾಗಿದೆ.

ಸಂಘದ ಕಾರ್ಯಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಡಾ. ವೀರೇಂದ್ರ ಹೆಗ್ಗಡೆಯವರು ಪೂರ್ಣ ಸಹಕಾರದ ಭರವಸೆ ನೀಡಿದರು. ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಾಜೇಶ ಶೆಟ್ಟಿ ಅಲೆವೂರು, ರಜತ ಮಹೋತ್ಸವದ ಸಂಚಾಲಕ ಮೊಹಮ್ಮದ್ ಶರೀಫ್, ಪ್ರಧಾನ ಕಾರ್ಯದರ್ಶಿ ಜಯಕರ್ ಸುವರ್ಣ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಸದಸ್ಯ ಪುಂಡಲೀಕ ಮರಾಠೆ ಇದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!