Wednesday, January 22, 2025
Wednesday, January 22, 2025

ರಾಜ್ಯಮಟ್ಟದ ಕವನ ಸ್ಪರ್ಧೆಯಲ್ಲಿ ನರೇಂದ್ರ ಎಸ್ ಗಂಗೊಳ್ಳಿ ಪ್ರಥಮ

ರಾಜ್ಯಮಟ್ಟದ ಕವನ ಸ್ಪರ್ಧೆಯಲ್ಲಿ ನರೇಂದ್ರ ಎಸ್ ಗಂಗೊಳ್ಳಿ ಪ್ರಥಮ

Date:

ಉಡುಪಿ, ಮಾ. 2: ಅಂತಾರಾಷ್ಟ್ರೀಯ ಲಯನ್ಸ್ ಕ್ಲಬ್ ಮತ್ತು ಲಯನ್ಸ್ ಕ್ಲಬ್ ಬೈಲಹೊಂಗಲ ಇವರ ವತಿಯಿಂದ ಕಳೆದ ನವೆಂಬರ್ ನಲ್ಲಿನ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ್ದ ಪ್ರಥಮ ಮಹಿಳಾ ಸೈನ್ಯವನ್ನು ಕಟ್ಟಿದ ಬೆಳವಡಿ ರಾಣಿ ಮಲ್ಲಮ್ಮ ಕುರಿತಾದ ರಾಜ್ಯಮಟ್ಟದ ಕವನ ಸ್ಪರ್ಧೆಯಲ್ಲಿ ಕುಂದಾಪುರ ತಾಲೂಕಿನ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಅವರ ‘ವೀರರಾಣಿ ಬೆಳವಡಿ ಮಲ್ಲಮ್ಮ’ ಹೆಸರಿನ ಕವಿತೆಗೆ ನಗದು ಬಹುಮಾನ ಪುರಸ್ಕಾರ ಲಭಿಸಿದೆ. ತಮ್ಮ ವೈವಿಧ್ಯಮಯ ಬರಹಗಳ ಮೂಲಕ ಸಾಹಿತ್ಯ ವಲಯದಲ್ಲಿ ಗುರುತಿಸಿಕೊಂಡಿರುವ ನರೇಂದ್ರ ಎಸ್ ಗಂಗೊಳ್ಳಿ ಅವರ ಅಂಕಣ ಬರಹಗಳ ಸಂಕಲನ ‘ಹೇಳದೆ ಹೋದ ಮಗಳಿಗೆ’ ಮತ್ತು ಕಥಾ ಸಂಕಲನ ‘ನಾಯಿ ನಾನು’ ಅಪಾರ ಮೆಚ್ಚುಗೆಗೆ ಪಾತ್ರವಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!