Tuesday, January 21, 2025
Tuesday, January 21, 2025

ವಿಶ್ವ ಶ್ರವಣ ದಿನಾಚರಣೆ

ವಿಶ್ವ ಶ್ರವಣ ದಿನಾಚರಣೆ

Date:

ಉಡುಪಿ, ಮಾ. 3: ವಿಶ್ವ ಶ್ರವಣ ದಿನ ಆಚರಣೆಯ ಕಾರ್ಯಕ್ರಮವು ಶುಕ್ರವಾರ ನಗರದ ಸರ್ಕಾರಿ ಕೂಸಮ್ಮ ಶಂಭು ಶೆಟ್ಟಿ ಸ್ಮರಣಾರ್ಥ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ಕಾರ್ಯಕ್ರಮ ಉದ್ಘಾಟಿಸಿದರು. ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಜಗೋಪಾಲ್ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು.

ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ನೋಡೆಲ್ ಅಧಿಕಾರಿ ಡಾ. ರಾಮರಾವ್, ಜಿಲ್ಲಾ ಆಸ್ಪತ್ರೆಯ ಕಿವಿ ಗಂಟಲು ತಜ್ಞ ಡಾ. ಮುರಳೀಧರ ಪಾಟೀಲ್, ಆಡಿಯೋಲಾಜಿಸ್ಟ್ ದಿಶಾ ಕಾರ್ನಾಡ್ ಉಪಸ್ಥಿತರಿದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ ಹೆಚ್ ಸ್ವಾಗತಿಸಿ, ವಂದಿಸಿದರು, ಆಡಿಯೋ ಮೆಟ್ರಿಕ್ ಅಸಿಸ್ಟೆಂಟ್ ಶಾಮೀಕ್ಷ ರಾವ್ ನಿರೂಪಿಸಿದರು.

ವಿಶ್ವ ಶ್ರವಣ ದಿನದ ಪ್ರಯುಕ್ತ ಶ್ರವಣ ದೋಷದ ಜಾಗೃತಿ ಜಾಥಾ ಮತ್ತು ಮಾಹಿತಿ ಕಾರ್ಯಕ್ರಮದ ಅಂಗವಾಗಿ ನಗರದ ಬೋರ್ಡ್ ಹೈಸ್ಕೂಲ್‌ನಿಂದ ಸರ್ಕಾರಿ ಕೂಸಮ್ಮ ಶಂಭು ಶೆಟ್ಟಿ ಸ್ಮರಣಾರ್ಥ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಯವರೆಗೆ ಜಾಥಾ ನಡೆಯಿತು. ಜಾಥಾದಲ್ಲಿ ನ್ಯೂ ಸಿಟಿ ಕಾಲೇಜ್ ಆಫ್ ನರ್ಸಿಂಗ್‌ನ ವಿದ್ಯಾರ್ಥಿಗಳು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!