Tuesday, January 21, 2025
Tuesday, January 21, 2025

ಮಾ.7- ಕಾರ್ಕಳದ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯ ಹೊರರೋಗಿ ವಿಭಾಗ ಮತ್ತು ಶಸ್ತ್ರಚಿಕಿತ್ಸಾ ಕೊಠಡಿಗಳ ಉದ್ಘಾಟನೆ

ಮಾ.7- ಕಾರ್ಕಳದ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯ ಹೊರರೋಗಿ ವಿಭಾಗ ಮತ್ತು ಶಸ್ತ್ರಚಿಕಿತ್ಸಾ ಕೊಠಡಿಗಳ ಉದ್ಘಾಟನೆ

Date:

ಕಾರ್ಕಳ, ಮಾ.4: ಕಾರ್ಕಳದ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಕೀರ್ತಿನಾಥ ಬಲ್ಲಾಳ ಅವರು ಮಾತನಾಡಿ, ನಮ್ಮ ಹೊಸದಾಗಿ ವಿಸ್ತರಿಸಿದ ಆಸ್ಪತ್ರೆ, ಕೆ ಕೃಷ್ಣ ಪ್ರಭು ಒಪಿಡಿ ಬ್ಲಾಕ್ ಮತ್ತು ಹೊಸ ಆಪರೇಷನ್ ಥಿಯೇಟರ್ ಕಾಂಪ್ಲೆಕ್ಸ್ ಮಾರ್ಚ್ 7 ರಂದು ಮಂಗಳವಾರ ಬೆಳಿಗ್ಗೆ 9.30ಕ್ಕೆ ಉದ್ಘಾಟಿಸಲಾಗುವುದು ಎಂದರು. ಡಾ ಟಿಎಮ್ಎ ಪೈ ರೋಟರಿ ಆಸ್ಪತ್ರೆಯು ಕಾರ್ಕಳದ ಹೃದಯಭಾಗದಲ್ಲಿದ್ದು, ಹಲವಾರು ವರ್ಷಗಳಿಂದ ಈ ಪ್ರದೇಶದಲ್ಲಿ ವಿಶ್ವಾಸಾರ್ಹ ಮತ್ತು ನಂಬುಗೆಯ ಆರೋಗ್ಯ ಸೇವೆ ಒದಗಿಸುತ್ತಿದೆ.

ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ವಿ ಸುನಿಲ್ ಕುಮಾರ್ ಅವರು ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಡಾ ಶರತ್ ಕುಮಾರ್ ರಾವ್, ಸಹ – ಉಪ ಕುಲಪತಿಗಳು -ಆರೋಗ್ಯ ವಿಜ್ಞಾನ, ಮಾಹೆ ಮಣಿಪಾಲ, ಲೆಫ್ಟಿನೆಂಟ್ ಜನರಲ್ (ಡಾ) ಎಂ ಡಿ ವೆಂಕಟೇಶ್- ಉಪಕುಲಪತಿಗಳು, ಮಾಹೆ, ಮಣಿಪಾಲ ಕಾರ್ಯಕ್ರಮದ ಗೌರವಾನ್ವಿತ ಅತಿಥಿಗಳಾಗಿದ್ದಾರೆ. ಡಾ. ಎಚ್.ಎಸ್. ಬಲ್ಲಾಳ್-ಸಹ ಕುಲಾಧಿಪತಿಗಳು, ಮಾಹೆ, ಮಣಿಪಾಲ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಡಾ. ಪದ್ಮರಾಜ್ ಹೆಗ್ಡೆ, ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ವೇಣುಗೋಪಾಲ್, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ, ರೋಟರಿ ಸದಸ್ಯರು ಹಾಗೂ ಹಿರಿಯ ವೈದ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಹೊಸದಾಗಿ ವಿಸ್ತರಿಸಿದ ಕಾರ್ಕಳ ಆಸ್ಪತ್ರೆಯಲ್ಲಿ ಆಧುನಿಕ ಆಪರೇಷನ್ ಥಿಯೇಟರ್ ಮತ್ತು 24*7 ಎಮರ್ಜೆನ್ಸಿ ಮತ್ತು ಟ್ರಾಮಾ ಸೌಲಭ್ಯಗಳು, ಸುಧಾರಿತ ರೋಗನಿರ್ಣಯದ ಉಪಕರಣಗಳು ಮತ್ತು ಸುಸಜ್ಜಿತ ಐಸಿಯು ಸೌಲಭ್ಯಗಳು ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳು ಮತ್ತು ಉಪಕರಣಗಳನ್ನು ಹೊಂದಿರುತ್ತದೆ ಎಂದು ಅವರು ಹೇಳಿದರು.

ಆಸ್ಪತ್ರೆಗೆ ಹೊಸ ವೈದ್ಯಕೀಯ ಸೇವೆಗಳನ್ನು ಸೇರಿಸುತ್ತಿದ್ದೇವೆ, ಸಾಮಾನ್ಯ ಶಸ್ತ್ರಚಿಕಿತ್ಸ ವಿಭಾಗ ಮತ್ತು ಮೂಳೆ ಶಸ್ತ್ರಚಿಕಿತ್ಸ ವಿಭಾಗ ಈಗ ಲಭ್ಯವಿರುವ ಹೊಸ ಸೇವೆಗಳು. ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಿಂದ ಹೃದಯಶಾಸ್ತ್ರ, ನರರೋಗ ಶಾಸ್ತ್ರ, ಕ್ಯಾನ್ಸರ್ (ಸರ್ಜಿಕಲ್ ಕ್ಯಾನ್ಸರ್ ಮತ್ತು ಪ್ರಶಾಮಕ ಚಿಕಿತ್ಸೆ) ಮತ್ತು ಮೂತ್ರಪಿಂಡಶಾಸ್ತ್ರದ ಸೂಪರ್ ಸ್ಪೆಷಾಲಿಟಿ ವಿಭಾಗಗಳ ಸಲಹೆಗಾರರ ನಿಯಮಿತ ಭೇಟಿಗಳ ಜೊತೆಗೆ ಅಸ್ತಿತ್ವದಲ್ಲಿರುವ ಜನರಲ್ ಮೆಡಿಸಿನ್, ಮಕ್ಕಳ ವಿಬಾಗ, ನೇತ್ರಶಾಸ್ತ್ರ, ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ, ಇಎನ್‌ಟಿ, ಅರಿವಳಿಕೆ ಮತ್ತು ಚರ್ಮ ರೋಗ ವಿಭಾಗದ ಸೌಲಭ್ಯವು ಮುಂದುವರಿಯುತ್ತದೆ. ನಮ್ಮ ಹೆಚ್ಚು ನುರಿತ ವೈದ್ಯರು ಮತ್ತು ವೃತ್ತಿಪರರ ತಂಡವು ಈ ವಿಶೇಷತೆಗಳಲ್ಲಿ ರೋಗಿಗಳಿಗೆ ಆರೈಕೆಯನ್ನು ಒದಗಿಸುತ್ತದೆ.

ಆಸ್ಪತ್ರೆಯು ಮೇಲ್ದರ್ಜೆಗೇರಿಸಿದ ಲ್ಯಾಬ್ ಸೌಲಭ್ಯವನ್ನು ಹೊಂದಿದ್ದು, ಮನೆಯಿಂದ ಮಾದರಿ ಸಂಗ್ರಹಣೆ ಸೌಲಭ್ಯ ಮತ್ತು ಆಂಬ್ಯುಲೆನ್ಸ್ ಸೌಲಭ್ಯವನ್ನು ಹೊಂದಿದೆ. ಡಾ ಟಿಎಂಎ ಪೈ ರೋಟರಿ ಆಸ್ಪತ್ರೆಯು ಕಳೆದ 2 ವರ್ಷಗಳಿಂದ ಡಯಾಲಿಸಿಸ್ ಸೌಲಭ್ಯವನ್ನು ವಿಸ್ತರಿಸುತ್ತಿದ್ದು, ತಿಂಗಳಿಗೆ ಸುಮಾರು 200 ಡಯಾಲಿಸಿಸ್ ನಡೆಸುತ್ತಿದೆ.

ಕಾರ್ಕಳ ಆಸ್ಪತ್ರೆಯ ವಿಸ್ತರಣೆಯು ಕಾರ್ಕಳ ಮತ್ತು ಸುತ್ತಮುತ್ತಲಿನ ಜನರಿಗೆ ಕೈಗೆಟುಕುವ ಮತ್ತು ಸುಲಭವಾಗಿ ಆರೋಗ್ಯ ಸೇವೆಯನ್ನು ಒದಗಿಸುವ ನಮ್ಮ ಬದ್ಧತೆಯ ಮಹತ್ವದ ಮೈಲಿಗಲ್ಲು. ಹೊಸ ಸೌಲಭ್ಯಗಳು, ಉಪಕರಣಗಳು ಮತ್ತು ಸೇವೆಗಳೊಂದಿಗೆ, ನಾವು ನಮ್ಮ ರೋಗಿಗಳಿಗೆ ಉತ್ತಮ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಮತ್ತು ಅವರು ಸಾಧ್ಯವಾದಷ್ಟು ಉತ್ತಮ ಗುಣಮಟ್ಟದ ಆರೈಕೆಯನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಬಹುದು. ಮಾಹೆ ಮಣಿಪಾಲದ ಭೋದನಾ ಆಸ್ಪತ್ರೆಗಳ ಮಾರ್ಕೆಟಿಂಗ್ ಮುಖ್ಯಸ್ಥ ಸಚಿನ್ ಕಾರಂತ್, ಮಣಿಪಾಲದ ಮಾರ್ಕೆಟಿಂಗ್ ಮ್ಯಾನೇಜರ್ ಮೋಹನ್ ಶೆಟ್ಟಿ, ಕಾರ್ಕಳ ಆಸ್ಪತ್ರೆಯ ಮ್ಯಾನೇಜರ್ ನಟೇಶ್ ಕುಮಾರ್ ಸುದ್ಧಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!