Tuesday, November 26, 2024
Tuesday, November 26, 2024

ನಗರ ಕೇಂದ್ರ ಗ್ರಂಥಾಲಯದಲ್ಲಿ ಓದುಗರಿಗೆ ಉತ್ತಮ ಸೇವೆ: ಸುಮಿತ್ರಾ ಆರ್ ನಾಯಕ್

ನಗರ ಕೇಂದ್ರ ಗ್ರಂಥಾಲಯದಲ್ಲಿ ಓದುಗರಿಗೆ ಉತ್ತಮ ಸೇವೆ: ಸುಮಿತ್ರಾ ಆರ್ ನಾಯಕ್

Date:

ಉಡುಪಿ, ಮಾ. 4: ಪ್ರತಿದಿನ ಗ್ರಂಥಾಲಯಕ್ಕೆ ಬರುವ ಸಾರ್ವಜನಿಕ ಓದುಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದ್ದು, ಉಡುಪಿ ಜಿಲ್ಲೆಯ ನಾಗರೀಕರು ಮತ್ತು ಪ್ರಜ್ಞಾವಂತರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಂಥಾಲಯದ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದು, ಉಡುಪಿ ನಗರ ಕೇಂದ್ರ ಗ್ರಂಥಾಲಯವು ಸಾರ್ವಜನಿಕ ಓದುಗರಿಗೆ ಉತ್ತಮ ಸೇವೆಯನ್ನು ನೀಡುತ್ತಿದೆ ಎಂದು ಉಡುಪಿ ನಗರಸಭೆ ಆಧ್ಯಕ್ಷೆ ಸುಮಿತ್ರಾ ನಾಯಕ್ ಹೇಳಿದರು. ಅವರು ಉಡುಪಿ ನಗರ ಕೇಂದ್ರ ಗ್ರಂಥಾಲಯಕ್ಕೆ ಉಪಯೋಗವಾಗುವಂತೆ, ಪುಸ್ತಕಗಳನ್ನು ಇಡುವ ಡಬಲ್ ರ‍್ಯಾಕ್‌ಗಳನ್ನು ವಯಕ್ತಿಕವಾಗಿ ಕೊಡುಗೆ ನೀಡಿ ಮಾತನಾಡಿದರು. ನಗರಸಭಾ ಸದಸ್ಯೆ ರಶ್ಮಿಚಿತ್ತರಂಜನ್ ಭಟ್, ಮಕ್ಕಳಿಗಾಗಿ 50 ಹೊಸ ಪುಸ್ತಕಗಳನ್ನು ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡಿದರು.

ಕಾರ್ಯಕ್ರಮದಲ್ಲಿ ಡಿಜಿಟಲ್ ಗ್ರಂಥಾಲಯ ಪಿತಾಮಹ ಡಾ. ಸತೀಶ್ ಕುಮಾರ್ ಹೊಸಮನಿ ಮಾತನಾಡಿ, ನಗರಸಭೆ ಅಧ್ಯಕ್ಷರು ಮತ್ತು ಸದಸ್ಯರು ಈ ರೀತಿ ಗ್ರಂಥಾಲಯಕ್ಕೆ ಪ್ರೋತ್ಸಾಹ ನೀಡುತ್ತಿರುವುದು ಇತರರಿಗೆ ಮಾದರಿ ಎಂದರು. ಇಲ್ಲಿನ ಜನತೆ ಸುಸಂಸ್ಕೃತರು ಮತ್ತು ಪ್ರಜ್ಞಾವಂತರು. ಪುಸ್ತಕಗಳು ನಮ್ಮ ನಾಡಿನ ಸಂಸ್ಕೃತಿಯ ಪ್ರತೀಕ. ಪುಸ್ತಕ ಸಂಸ್ಕೃತಿ ಬೆಳೆಸಲು ಇಂತಹ ಅತ್ಯುತ್ತಮ ಪೀಠೋಪಕರಣ, ಪುಸ್ತಕಗಳನ್ನು ಕೊಡುಗೆ ನೀಡುವುದರ ಮೂಲಕ ಗ್ರಂಥಾಲಯದ ಅಭಿವೃದ್ಧಿಗೆ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಎಂದರು.

ಮಂಗಳೂರು ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕ ರಾಘವೇಂದ್ರ , ಜಿಲ್ಲಾ ಕೇಂದ್ರ ಗ್ರಂಥಾಲಯ, ಮಂಗಳೂರಿನ ಮುಖ್ಯ ಗ್ರಂಥಾಲಯಾಧಿಕಾರಿ ಗಾಯತ್ರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ಉಡುಪಿಯ ಜಯಶ್ರೀ ಎಂ., ಇವರು ಉಪಸ್ಥಿತರಿದ್ದರು. ಉಡುಪಿ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಗ್ರಂಥಾಲಯ ಸಹಾಯಕರಾದ ಸುನೀತಾ ಬಿ.ಎಸ್ ಪ್ರಾರ್ಥಿಸಿದರು. ಪ್ರಥಮ ದರ್ಜೆ ಸಹಾಯಕರಾದ ಶಕುಂತಳ ಕುಂದರ್ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!