Monday, November 25, 2024
Monday, November 25, 2024

ಕೈವಾರ ತಾತಯ್ಯ, ಜಗದ್ಗುರು ರೇಣುಕಾಚಾರ್ಯ ಜಯಂತಿ

ಕೈವಾರ ತಾತಯ್ಯ, ಜಗದ್ಗುರು ರೇಣುಕಾಚಾರ್ಯ ಜಯಂತಿ

Date:

ಉಡುಪಿ, ಮಾ. 7: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಜಗದ್ಗುರು ರೇಣುಕಾಚಾರ್ಯ ಮತ್ತು ಕೈವಾರ ತಾತಯ್ಯ ಜಯಂತಿ ಆಚರಣೆಯು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಇಲಾಖೆ ವತಿಯಿಂದ ಆಚರಿಸಲಾಗುವ ಎಲ್ಲಾ ಮಹನೀಯರು, ದಾರ್ಶನಿಕರು, ತತ್ವ ಜ್ಞಾನಿಗಳು, ವಚನಕಾರರ ಬದುಕು ಹಾಗೂ ಮಾರ್ಗದರ್ಶನಗಳು ನಮ್ಮೆಲ್ಲರ ಜೀವನಕ್ಕೆ ಪ್ರೇರಣೆ ಎಂದರು.

ಜಂಗಮ ಮಠದ ಡಾ. ಯು.ಸಿ ನಿರಂಜನ್ ಜಯಂತಿ ಕುರಿತು ಉಪನ್ಯಾಸ ನೀಡಿ, ಮಾನವನ ದಾನವ ಗುಣಗಳನ್ನು ದಹಿಸಿ ಆತನನ್ನು ಮಹಾದೇವನನ್ನಾಗಿಸಲು ಅಪೂರ್ವ ಸಿದ್ಧಾಂತವನ್ನು ನೀಡಿದವರು ಶ್ರೀ ಜಗದ್ಗುರು ರೇಣುಕಾಚಾರ್ಯರು. ಕೈವಾರ ತಾತಯ್ಯ ಅವರು ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಪಾರಂಗತರು ಮತ್ತು ಪವಾಡ ಪುರುಷರು. ಇವರೊಬ್ಬ ನಿಜವಾದ ಮಾನವತಾವಾದಿಯಾಗಿದ್ದು, ಇವರನ್ನು ಭಾರತದ ನಾಸ್ಟ್ರಡಾಮಸ್ ಎಂದು ಕರೆಯುತ್ತಾರೆ ಎಂದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ಉಪ ತಹಶೀಲ್ದಾರ್ ವಸಂತ ಕುಮಾರ್, ಅಖಿಲ ಭಾರತ ವೀರಶೈವ ಮಹಾಸಭೆ ಜಿಲ್ಲಾ ಅಧ್ಯಕ್ಷ ಗಿರೀಶ್ ಕುಮಾರ್, ವೀರಶೈವ ಸಮುದಾಯ ಮುಖಂಡರಾದ ಸಿದ್ಧಬಸವಯ್ಯ ಸ್ವಾಮಿ, ಕೇಶವ ಮೂರ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ನರಸಿಂಹಮೂರ್ತಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು, ರವಿರಾಜ್ ಹೆಚ್.ಪಿ. ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!