Tuesday, January 21, 2025
Tuesday, January 21, 2025

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಕೊಲೊರೆಕ್ಟಲ್ ಕ್ಯಾನ್ಸರ್ ಜಾಗೃತಿ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಕೊಲೊರೆಕ್ಟಲ್ ಕ್ಯಾನ್ಸರ್ ಜಾಗೃತಿ

Date:

ಮಣಿಪಾಲ, ಮಾ.8: ಮಾರ್ಚ್ ತಿಂಗಳನ್ನು ಕೊಲೊರೆಕ್ಟಲ್ ಕ್ಯಾನ್ಸರ್ (ದೊಡ್ಡ ಕರುಳು ಮತ್ತು ಗುದನಾಳ ಸಂಬಂಧಿತ) ಜಾಗೃತಿ ಮಾಸವನ್ನಾಗಿ ರಾಷ್ಟ್ರೀಯವಾಗಿ ಆಚರಿಸಲಾಗುತ್ತದೆ. ಈ ಪ್ರಯುಕ್ತ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಕೊಲೊರೆಕ್ಟಲ್ ಕ್ಯಾನ್ಸರ್ ಜಾಗೃತಿ ಜಾಗೃತಿ ಮಾತು ಮತ್ತು ಮಾಹಿತಿ ಕೈಪಿಡಿ ಹಾಗೂ ವಿಶೇಷ ರಿಯಾಯಿತಿ ದರದ ಪ್ಯಾಕೇಜ್ ಬಿಡುಗಡೆ ಮಾಡಲಾಯಿತು. ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ. ಆನಂದ್ ವೇಣುಗೋಪಾಲ್ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಗ್ಯಾಸ್ಟ್ರೋ ಎಂಟೆರೊಲೊಜಿ ವಿಭಾಗದ ಪ್ರಾದ್ಯಾಪಕರು ಮತ್ತು ಮುಖ್ಯಸ್ಥರು ಹಾಗೂ ಉಪವೈದ್ಯಕೀಯ ಅಧೀಕ್ಷಕರಾದ ಡಾ.ಶಿರನ್ ಶೆಟ್ಟಿ, ಕೊಲೊರೆಕ್ಟಲ್ ಕ್ಯಾನ್ಸರ್, ಕೋಲನ್ (ದೊಡ್ಡ ಕರುಳು) ಅಥವಾ ಗುದನಾಳದಲ್ಲಿ ಸಂಭವಿಸುತ್ತದೆ. ಜೀವಕೋಶಗಳು ಅಸಹಜವಾದಾಗ ಮತ್ತು ನಿಯಂತ್ರಣವಿಲ್ಲದೆ ವಿಭಜಿಸಿ, ಗೆಡ್ಡೆ ಎಂದು ಕರೆಯಲ್ಪಡುವ ದ್ರವ್ಯರಾಶಿಯನ್ನು ರೂಪಿಸುತ್ತವೆ.

ಭಾರತದಲ್ಲಿ, ಮಹಿಳೆಯರಿಗೆ ಹೋಲಿಸಿದರೆ ಪುರುಷರಲ್ಲಿ ಕರುಳಿನ ಕ್ಯಾನ್ಸರ್ ಮತ್ತು ಗುದನಾಳದ ಕ್ಯಾನ್ಸರ್ ನ ಪ್ರಮಾಣವು ಹೆಚ್ಚಾಗಿರುತ್ತದೆ. ಕೊಲೊರೆಕ್ಟಲ್ ಕ್ಯಾನ್ಸರ್ ಮರಣಕ್ಕೆ ಕಾರಣವಾಗಿರುವ ಕ್ಯಾನ್ಸರ್ ಗಳಲ್ಲಿ ಎರಡನೇ ಸ್ಥಾನದಲ್ಲಿದೆ, ಕೊಲೊರೆಕ್ಟಲ್ ಕ್ಯಾನ್ಸರ್ ಅನ್ನು ತಡೆಗಟ್ಟಬಹುದು, ಕೊಲೊನೋಸ್ಕೋಪಿ ಇದನ್ನು ಪತ್ತೆ ಹಚ್ಚಲು ಇರುವ ಸೂಕ್ತ ಪರೀಕ್ಷಾ ವಿಧಾನವಾಯಿದೆ. ಆದ್ದರಿಂದ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಈ ತಿಂಗಳ 31 ದಿನಾಂಕದವರೆಗೆ ವಿಶೇಷ ರಿಯಾಯಿತಿಯಾಗಿ 4999 ರೂಪಾಯಿ ದರದಲ್ಲಿ ಕೊಲೊನೋಸ್ಕೋಪಿ ಮತ್ತು ಅವಶ್ಯಕ ರಕ್ತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ, ಕಾರ್ಕಳ ಡಾ. ಟಿಎಂಪೈ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಕೀರ್ತಿನಾಥ ಬಲ್ಲಾಳ, ಮಾರ್ಕೆಟಿಂಗ್ ಮುಖ್ಯಸ್ಥ ಸಚಿನ್ ಕಾರಂತ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಂಪೆನಿ ಸೆಕ್ರೇಟರಿ ಪ್ರವೇಶ ಪರೀಕ್ಷೆ: ಕಾರ್ಕಳ ಜ್ಞಾನಸುಧಾದ ವಿದ್ಯಾರ್ಥಿಗಳ ಸಾಧನೆ

ಕಾರ್ಕಳ, ಜ.21: ದಿನಾಂಕ 11.01.2025 ರಂದು ಇನ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್...

ಸೇವಾ ದಿನಾಚರಣೆ

ಗಂಗೊಳ್ಳಿ, ಜ.21: ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ, ಪ್ರೀತಿ, ಶಿಸ್ತು ಇರಬೇಕು....

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...
error: Content is protected !!