Home ಸುದ್ಧಿಗಳು ಪ್ರಾದೇಶಿಕ ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರ ಪಾತ್ರ ಮುಖ್ಯವಾದದ್ದು: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರ ಪಾತ್ರ ಮುಖ್ಯವಾದದ್ದು: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

367
0

ಉಡುಪಿ, ಮಾ. 8: ಆಧುನಿಕ ಯುಗದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರ ಪಾತ್ರ ಮುಖ್ಯವಾದದ್ದು, ಅವರಿಗೆ ಎಲ್ಲಾ ಕೆಲಸ ಕಾರ್ಯಗಳಲ್ಲೂ ಸಮಾನತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಬುಧವಾರ ನಗರದ ಶ್ರೀಕೃಷ್ಣ ಮಠ ಆವರಣದ ರಾಜಾಂಗಣದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಹಾಗೂ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ, ಜಿಲ್ಲಾ ಹಾಗೂ ತಾಲೂಕು ಸ್ತ್ರೀಶಕ್ತಿ ಒಕ್ಕೂಟ ಹಾಗೂ ಪರ್ಯಾಯ ಶ್ರೀ ಕೃಷ್ಣಾಪುರ ಮಠ ಉಡುಪಿ ಇವರ ಸಹಯೋಗದೊಂದಿಗೆ ನಡೆದ ಅಂತಾರಾಷ್ಟೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರು ಪ್ರತಿಯೊಂದು ರಂಗ ಹಾಗೂ ಕ್ಷೇತ್ರದಲ್ಲಿ ತಮ್ಮನ್ನ ತಾವು ತೊಡಗಿಸಿಕೊಂಡು ಸೇವೆಯನ್ನು ನೀಡಬೇಕು. ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಕ್ರೀಡೆ, ಸಾಹಿತ್ಯ, ಕಲೆ, ಆಡಳಿತ ಸೇರಿದಂತೆ ಮುಂತಾದ ಕ್ಷೇತ್ರಗಳಲ್ಲಿ ಸ್ಪರ್ಧೆ ನೀಡುತ್ತಿದ್ದಾರೆ. ಹೀಗೆ ಮಹಿಳೆಯರಿಗೆ ಎಲ್ಲಾ ಪ್ರಕಾರಗಳಲ್ಲೂ ಅವಕಾಶ ಸೀಗಬೇಕು ಎಂದರು. ಸಮಾಜದ ಪ್ರತಿಯೊಂದು ಕ್ಷೇತ್ರದಲ್ಲೂ ನಾವು ಸಮಾನವಾಗಿದ್ದೇವೆ ಹಾಗೂ ಎಂತಹ ಕೆಲಸ ಕಾರ್ಯಗಳನ್ನು ನಾವೂ ಮಾಡಬಲ್ಲೆವು ಎಂಬ ಭಾವನೆ ನಿಮ್ಮಲ್ಲಿ ಮೂಡಬೇಕು. ಸ್ಪೂರ್ತಿದಾಯಕ ಮಹಿಳೆಯರನ್ನ ಪ್ರೇರಣೆಯಾಗಿ ತೆಗೆದುಕೊಂಡು ಮುಂದಿನ ದಿನಗಳಲ್ಲಿ ಎಲ್ಲಾ ಸೇವೆಗಳಲ್ಲೂ ಸಮಾನ ಅವಕಾಶ ಗಳಿಸಬೇಕು ಎಂದರು.

ಒನ್ ಸ್ಟಾಪ್ ಸೆಂಟರ್ ಮತ್ತು ಸಾಂತ್ವನ ಕೇಂದ್ರಗಳಂತಹ ಸಂಸ್ಥೆಗಳಲ್ಲಿ ಕೆಲಸ ಮಾಡುವವರು ನೊಂದ ಮಹಿಳೆಯರಿಗೆ ಧೈರ್ಯ ತುಂಬುವ ಮೂಲಕ ಅವರ ಸಮಸ್ಯೆಗಳ ಬಗೆಹರಿಸಿ ನೆರವು ನೀಡಬೇಕು. ನೊಂದವರಿಗೆ ಸ್ವಯಂ ಉದ್ಯೋಗ ಹೊಂದಲು ವೃತ್ತಿ ತರಬೇತಿ ಮತ್ತು ಬೇರೆ ಬೇರೆ ಅಂಶಗಳ ಬಗ್ಗೆ ಮಾಹಿತಿ ನೀಡಬೇಕಿಕು. ಪ್ರತಿಯೊಂದು ಹಂತದಲ್ಲೂ ಖಾಸಗಿ ಅಥವಾ ಸರಕಾರಿ ಯಾವುದೇ ಸಂಸ್ಥೆಯಾದರೂ ಅದರಲ್ಲಿ ಮಹಿಳೆಯರಿಗೋಸ್ಕರ ದೂರು ನೀಡುವ ಅಥವಾ ಆಂತರಿಕ ಸಮಿತಿ ರಚಿಸಿ, ಮಹಿಳೆಯರು ಸಮಸ್ಯೆಗೆ ಒಳಗಾದಾಗ ಅವರಿಗೆ ನೆರವು ನೀಡಬೇಕು ಎಂದರು.

ಶಾಸಕ ಕೆ. ರಘುಪತಿ ಭಟ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯಗಳ ಕುರಿತು ಮಾಧ್ಯಮಗಳಲ್ಲಿ ಅನೆಕ ದೂರುಗಳು ಕೇಳಿ ಬರುತ್ತಿವೆ. ಇವುಗಳ ನಿಯಂತ್ರಣಕ್ಕೆ ಮುಂದಾಗಬೇಕು ಎಂದ ಅವರು, ಮಹಿಳೆಯರು ಪುರುಷರಿಗಿಂತ ಕಡಿಮೆ ಏನಿಲ್ಲ ಎಂಬುವAತೆ ಎಲ್ಲಾ ಹುದ್ದೆಗಳಲ್ಲಿಯೂ ಕಾರ್ಯನಿರ್ವಹಿಸಲು ಮುಂದಾಗಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಮಾತನಾಡಿ, ಮಹಿಳಾ ದಿನಾಚರಣೆಯ ಉದ್ದೇಶ ಮಹಿಳೆಯರನ್ನ ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಸಬಲರನ್ನಾಗಿ ಮಾಡುವುದಾಗಿದೆ. ಸಮಾಜದ ಎಲ್ಲಾ ಮಹಿಳೆಯರ ವiತ್ತು ಯುವತಿಯರ ಸಬಲಿಕರಣಕ್ಕೆ ಶಿಕ್ಷಣ ಬಹಳ ಮುಖ್ಯ. ದೇಶದಲ್ಲಿ ಅಭಿವೃದ್ಧಿ ಮತ್ತು ಬದಲಾವಣೆ ತರುವ ನಿಟ್ಟಿನಲ್ಲಿ ಮಹಿಳೆಯರು ಧೈರ್ಯದಿಂದ ಮುಂದೆ ಬಂದು ತಮಗಾಗುವ ದೌರ್ಜನ್ಯ ಶೋಷಣೆ ಬಗ್ಗೆ ನೇರವಾಗಿ ಹೇಳಿಕೊಳ್ಳುವ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು. ಮಹಿಳೆಯರಿಗೆ ಗೌರವ ಈ ದಿನಾಚರಣೆಯ ದಿನಕ್ಕೆ ಮಾತ್ರವಲ್ಲದೇ ಪ್ರತಿ ದಿನ ಗೌರವ ನೀಡುವಂತಹ ವ್ಯವಸ್ಥೆ ಕಲ್ಪಿಸಿಕೊಳ್ಳಬೇಕಾಗುತ್ತದೆ. ಮಹಿಳೆಯರಿಗೆ ಸಂಬಂಧಪಟ್ಟ ಹಲವಾರು ಕಾನೂನುಗಳು ಇದ್ದರೂ ಅವಳ ಮೇಲಾಗುತ್ತಿರುವ ದೌರ್ಜನ್ಯ ನಿಲ್ಲುತ್ತಿಲ್ಲ. ಮಹಿಳೆಯರನ್ನು ನೋಡುವ ದೃಷ್ಠಿಯನ್ನು ಬದಲಾಯಿಸಿಕೊಂಡು ಪುರುಷರು ಕೂಡ ಮಹಿಳೆಯರ ಸಬಲೀಕರಣಕ್ಕೆ ಪ್ರೋತ್ಸಾಹ ನೀಡಬೇಕು ಎಂದರು.

ಕಲೆ, ಕ್ರೀಡೆ, ಸಂಸ್ಕೃತಿ ಸಾಹಿತ್ಯ ಮುಂತಾದ ಕ್ಷೇತ್ರದಲ್ಲಿ ಸಾಧನೆಗೈದ ಮಕ್ಕಳಿಗೆ ಹಾಗೂ ಅನುಭವ ಪರಿಣಿತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆಯರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು. ಮಹಿಳೆಯರು ಉತ್ಪಾದಿಸಿದ ವಸ್ತುಗಳ ಮಾರಾಟ ಮತ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ಮಹಿಳಾ ಮಂಡಳಗಳ ಒಕ್ಕೂಟದ ಜಿಲ್ಲಾಧ್ಯಕ್ಷೆ ಸರಳಾ ಕಾಂಚನ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಬಿ ಹೆಚ್ ಕೃಷ್ಣಪ್ಪ, ಕಾರ್ಯದರ್ಶಿ ವಸಂತಿ ರಾವ್, ಕುಂದಾಪುರ ಮಹಿಳಾ ಮಂಡಲದ ಅಧ್ಯಕ್ಷೆ ರಾಧಾ ದಾಸ್, ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಕಾರ್ಯದರ್ಶಿ ಪ್ರೇಮಾ, ಮತ್ತು ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.