Sunday, September 22, 2024
Sunday, September 22, 2024

ಬಿ. ಬಿ. ಹೆಗ್ಡೆ ಕಾಲೇಜು: ವಿಶ್ವ ಮಹಿಳಾ ದಿನಾಚರಣೆ

ಬಿ. ಬಿ. ಹೆಗ್ಡೆ ಕಾಲೇಜು: ವಿಶ್ವ ಮಹಿಳಾ ದಿನಾಚರಣೆ

Date:

ಕುಂದಾಪುರ, ಮಾ. 8: ವಿಶ್ವ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಕುಂದಾಪುರ ಸಿಟಿ ಜೆಸಿಐ ಹಾಗೂ ಕಾಲೇಜಿನ ಎನ್.ಎಸ್.ಎಸ್. ಘಟಕ, ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಾದ ಶರ್ಮಿಳಾ ಬುತೆಲ್ಲೋ (ಉದ್ಯಮ ಕ್ಷೇತ್ರ), ಜ್ಯೋತಿ (ಕೃಷಿ ಮತ್ತು ಹೈನುಗಾರಿಕೆ), ಶ್ರೀನಿಧಿ ಖಾರ್ವಿ(ಸಾಂಸ್ಕೃತಿಕ), ಅಂಕಿತಾ ಸಿ. ಶೇಟ್ (ಬಹುಮುಖ ಪ್ರತಿಭೆ), ಪ್ರತೀಕ್ಷಾ (ಶೈಕ್ಷಣಿಕ), ದಿವ್ಯಾ (ಕ್ರೀಡೆ) ಇವರನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಸಂಧ್ಯಾ ನಾಯಕ್ ಮಾತನಾಡಿ, ಸಂವಿಧಾನದ ಮಹತ್ವ ಮತ್ತು ಲಿಂಗ ಸಮಾನತೆಯ ಕುರಿತು ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜೆಸಿಐ ಕುಂದಾಪುರ ಸಿಟಿಯ ಅಧ್ಯಕ್ಷೆ ಡಾ. ಸೋನಿ ಡಿ’ಕೋಸ್ಟ ಸ್ವಾಗತಿಸಿದರು. ಜೆಸಿಐ ಕುಂದಾಪುರ ಸಿಟಿಯ ಸ್ಥಾಪಕಾಧ್ಯಕ್ಷ ಹುಸೈನ್ ಹೈಕಾಡಿ ಪ್ರಸ್ತಾವಿಸಿ, ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಆಶಯ ನುಡಿಗಳನ್ನಾಡಿದರು. ಜೇಸಿ ಪ್ರೇಮಾ ಡಿ ಚುನ್ಹಾ, ಜೇಸಿ ಸೌರಭಿ ಪೈ, ಮೆಬಲ್ ಡಿ’ಸೋಜ, ಉಪನ್ಯಾಸಕ ಯೋಗೀಶ್ ಶ್ಯಾನುಭೋಗ್, ವಿದ್ಯಾರ್ಥಿಗಳಾದ ವೈಷ್ಣವಿ ಎಮ್.ಎಸ್., ಶ್ರೀನಾಭ ಉಪಾಧ್ಯ ಸನ್ಮಾನಿತರನ್ನು ಪರಿಚಯಿಸಿದರು. ಜೇಸಿಐ ವಲಯ ಅಧ್ಯಕ್ಷ ಕಾರ್ತಿಕೇಯ ಮಧ್ಯಸ್ಥ ಹಾಗೂ ಜೇಸಿಐ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಶ್ರೀನಿಧಿ ಖಾರ್ವಿ ಭಾವಗೀತೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ವೀಣಾ ವಿ. ಭಟ್ ವಂದಿಸಿದರು. ಎನ್.ಎಸ್.ಎಸ್. ಸಹ ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!