ಕುಂದಾಪುರ, ಮಾ. 11: ಮಂಗಳೂರು ವಿ.ವಿ.ಯ 2021-22ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾದ ಶುಭಲಕ್ಷ್ಮೀ ಬಿ.ಬಿ.ಎ. ಪದವಿಯಲ್ಲಿ ದ್ವಿತೀಯ ರ್ಯಾಂಕ್, ಅಕ್ಷಯ್ ಶೆಟ್ಟಿ ಬಿ.ಎಸ್ಸಿ ಪದವಿಯಲ್ಲಿ ದ್ವಿತೀಯ ರ್ಯಾಂಕ್, ಅಕ್ಷತಾ ಬಿ.ಕಾಂ. ಪದವಿಯಲ್ಲಿ ಒಂಬತ್ತನೇ ರ್ಯಾಂಕ್ ಪಡೆದುಕೊಂಡಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಬಿ.ಎಂ. ಸುಕುಮಾರ ಶೆಟ್ಟಿ, ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ, ಆಡಳಿತ ಮಂಡಳಿಯ ಸದಸ್ಯರು, ಬೋಧಕ- ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.