Home ಸುದ್ಧಿಗಳು ಪ್ರಾದೇಶಿಕ ಕಾಡಬೆಟ್ಟು: ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ

ಕಾಡಬೆಟ್ಟು: ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ

218
0

ಉಡುಪಿ, ಮಾ. 13: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಸಹಯೋಗದಲ್ಲಿ, ಸೋಮವಾರ ಉಡುಪಿಯ ಕಾಡಬೆಟ್ಟುವಿನ ಟಿ.ಎ.ಪೈ. ಮಾಡರ್ನ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದ ಉದ್ಘಾಟನೆಯನ್ನು ನಗರಸಭಾ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್ ನೆರವೇರಿಸಿದರು. ಮಕ್ಕಳಿಗೆ ಜಂತುಹುಳ ನಿವಾರಣೆಯ ಆಲ್ಬೆಂಡಾಜೋಲ್ ಮಾತ್ರೆಗಳನ್ನು ವಿತರಿಸಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಪ್ರಭಾರ) ಡಾ.ಲತಾ ನಾಯಕ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀರಾಮರಾವ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಎಂ.ಜಿ.ರಾಮ, ಉಡುಪಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಿವೇಕಾನಂದ, ಟಿ.ಎ.ಪೈ. ಮಾಡರ್ನ್ ಹಿರಿಯ ಪ್ರಾಥಮಿಕ ಶಾಲೆಯ ಸಂಚಾಲಕ ಹೆಚ್.ಆರ್.ಶೆಣ್ಯೆ, ಮುಖ್ಯೋಪಾಧ್ಯಾಯೆ ಸುಲೋಚನಾ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.