Friday, July 24, 2026
Friday, July 24, 2026

ಕೋಟ ಲಾಠಿ ಚಾರ್ಜ್ ಪ್ರಕರಣ- ಕೋಟ ಎಸ್.ಐ ಅಮಾನತು

ಕೋಟ ಲಾಠಿ ಚಾರ್ಜ್ ಪ್ರಕರಣ- ಕೋಟ ಎಸ್.ಐ ಅಮಾನತು

Date:

ಉಡುಪಿ: ಕೋಟತಟ್ಟುವಿನ ಕೊರಗ ಸಮುದಾಯದ ಮನೆಯಲ್ಲಿ ಮೆಹಂದಿ ಕಾರ್ಯಕ್ರಮದ ಸಂದರ್ಭದಲ್ಲಿ ಪೊಲೀಸರ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಪಿ.ಎಸ್.ಐ ಸಂತೋಷ್ ಅವರನ್ನು ಅಮಾನತು ಮಾಡಲಾಗಿದೆ.

ಈ ಬಗ್ಗೆ ಪಶ್ಚಿಮ ವಲಯ ಐಜಿಪಿ ಆದೇಶ ಹೊರಡಿಸಿದ್ದಾರೆ. ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳಿದ ಐದು ಪೊಲೀಸ್ ಸಿಬ್ಬಂದಿಗಳನ್ನು ವರ್ಗಾವಣೆಗೊಳಿಸಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಹೇಳಿದ್ದಾರೆ.

ಲಾಠಿ ಚಾರ್ಜ್ ಘಟನೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಘಟನೆಯನ್ನು ಖಂಡಿಸಿ ಲಾಠಿ ಚಾರ್ಜ್ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದರು.

ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಸೇರಿದಂತೆ ಪಕ್ಷಾತೀತವಾಗಿ ಮುಖಂಡರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಘಟನೆಯನ್ನು ಖಂಡಿಸಿ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!