Tuesday, January 21, 2025
Tuesday, January 21, 2025

ಪ್ರತಿಯೊಬ್ಬರು ಗ್ರಾಹಕರ ಹಕ್ಕುಗಳನ್ನು ತಿಳಿದುಕೊಳ್ಳುವುದು ಮುಖ್ಯ: ನ್ಯಾ,ಶರ್ಮಿಳಾ ಎಸ್

ಪ್ರತಿಯೊಬ್ಬರು ಗ್ರಾಹಕರ ಹಕ್ಕುಗಳನ್ನು ತಿಳಿದುಕೊಳ್ಳುವುದು ಮುಖ್ಯ: ನ್ಯಾ,ಶರ್ಮಿಳಾ ಎಸ್

Date:

ಉಡುಪಿ, ಮಾ. 15: ಸಮಾಜದ ಪ್ರತಿಯೊಬ್ಬ ಪ್ರಜೆಯೂ ಗ್ರಾಹಕರ ಹಕ್ಕುಗಳನ್ನು ತಿಳಿದುಕೊಳ್ಳುವುದು ಮುಖ್ಯ. ಪ್ರಪಂಚದಾದ್ಯಂತ ಇರುವ ವಸ್ತುಗಳು, ಸರಕುಗಳು ಮತ್ತು ಸೇವೆಗಳ ಮೌಲ್ಯ, ಸಮಗ್ರತೆ, ವೆಚ್ಚ ಹಾಗೂ ಅವುಗಳ ಗುಣಮಟ್ಟದ ಬಗ್ಗೆ ತಿಳಿದುಕೊಳ್ಳುವ ಉದ್ದೇಶದಿಂದ ಈ ದಿನಾಚರಣೆಯನ್ನು ಆಚರಿಸಲಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್ ಹೇಳಿದರು.

ಅವರು ಬುಧವಾರ ನಗರದ ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ, ಬಳಕೆದಾರರ ವೇದಿಕೆ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಉಡುಪಿ ಇವರ ಸಹಯೋಗದೊಂದಿಗೆ ನಡೆದ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಾಮಾಜಿಕ ಸಮಸ್ಯೆಗಳ ವಿರುದ್ಧ ಹೋರಾಡಲು ಗ್ರಾಹಕರನ್ನು ಸಬಲೀಕರಣಗೊಳಿಸುವುದು ಹಾಗೂ ಅವರ ಹಕ್ಕುಗಳ ಮತ್ತು ಬೇಡಿಕೆಗಳ ಬಗ್ಗೆ ಅರಿವು ಮೂಡಿಸಬೇಕು. ಸರಕಾರ ಗ್ರಾಹಕ ಸಂರಕ್ಷಣಾ ಕಾಯ್ದೆಯಡಿ ಸರಕುಗಳ ಕುರಿತು ವ್ಯಾಪಾರ ಮತ್ತು ಪ್ರಚಾರ ಮಾಡುವ ಹಕ್ಕನ್ನು ನೀಡಿದೆ ಅದರ ಬಗ್ಗೆ ಗ್ರಾಹಕರು ಇನ್ನೂ ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದರು. ಗ್ರಾಹಕರ ಸಂರಕ್ಷಣಾ ಕಾಯ್ದೆಯಡಿ ದೂರುಗಳನ್ನು ಪರಿಹರಿಸಲು ಯಾವುದೇ ರೀತಿಯ ದೂರುಗಳನ್ನು ಆಯಾ ಜಿಲ್ಲೆಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ನೀಡಬಹುದು. ಗ್ರಾಹಕರಿಗೆ ಸರಕುಗಳ ಬಗ್ಗೆ ತಿಳಿದುಕೊಳ್ಳುವ ಹಕ್ಕು, ಶಿಕ್ಷಣ ಮತ್ತು ವ್ಯವಹಾರದ ಜಾಗೃತಿ ಹಕ್ಕು, ಅವಧಿ ಮುಗಿದ ಸರಕುಗಳ ಬಗ್ಗೆ ದೂರು ನೀಡುವ ಹಕ್ಕುಗಳನ್ನು ಹೊಂದಿದ್ದಾರೆ ಎಂದರು.

ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಜಿಲ್ಲಾಧ್ಯಕ್ಷ ಸುನಿಲ್ ಟಿ ಮಾಸರೆಡ್ಡಿ ಮಾತನಾಡಿ, 1962 ರಲ್ಲಿ ಅಂದಿನ ಅಮೇರಿಕಾದ ಅಧ್ಯಕ್ಷ ಜಾನ್ ಎಫ್ ಕೆನಡಿ ಗ್ರಾಹಕರ ಹಕ್ಕುಗಳ ಜಾರಿಗೆ ತರುವಲ್ಲಿ ಪ್ರಮುಖರಾದರು. ಅಂದಿನಿAದ ಮಾರ್ಚ್ 15 ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ ಎಂದು ಆಚರಿಸಲು ಪ್ರಾರಂಭಿಸಲಾಯಿತು. ಈ ಕಾರ್ಯಕ್ರಮದ ಉದ್ದೇಶ ಗ್ರಾಹಕರಿಗೆ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದಾಗಿದೆ ಎಂದರು. ಗ್ರಾಹಕರ ಹಕ್ಕುಗಳ ತಿಳಿದು ಅವರಿಗೆ ರಕ್ಷಣೆ ಒದಗಿಸುವುದು ನಾಗರೀಕರ ಕರ್ತವ್ಯ. 2019ರ ಕಾಯಿದೆ ಪ್ರಕಾರ ಗ್ರಾಹಕರು ಅವರ ದೂರುಗಳನ್ನು ಆನ್‌ಲೈನ್ ಮುಖಾಂತರ ನೀಡಬಹುದು. ಪ್ರಕರಣ ದಾಖಲಿಸಿ ಅಂತಹವರಿಗೆ ಸೂಕ್ತ ನ್ಯಾಯವನ್ನು ಒದಗಿಸುತ್ತೆವೆ ಎಂದರು.

ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಮಾಜಿ ಪ್ರಾಂಶುಪಾಲೆ ಸುರೇಖಾ, ಪ್ರಾಧ್ಯಾಪಕ ಕೆ ನಾರಾಯಣ, ನಿರ್ದೇಶಕಿ ನಿರ್ಮಲಾ, ಬಳಕೆದಾರರ ವೇದಿಕೆಯ ಎ.ಪಿ ಕೊಡಂಚ, ಜಿಲ್ಲಾ ಗ್ರಾಹಕ ಪರಿಹಾರ ಆಯೋಗದ ಸದಸ್ಯೆ ಸುಜಾತಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಪಿ.ಕೆ.ಬಿನೋಯ್ ಸ್ವಾಗತಿಸಿದರು. ಭಾರತೀಯ ವಿಕಾಶ ಟ್ರಸ್ಟ್ನ ಲಕ್ಷಿö್ಮÃಬಾಯಿ ನಿರೂಪಿಸಿದರು. ವಿಶ್ವಸ್ಥ ಹರಿಕೃಷ್ಣ ಶಿವತ್ತಾಯ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!