Home ಸುದ್ಧಿಗಳು ಪ್ರಾದೇಶಿಕ ಬೈಂದೂರು: ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

ಬೈಂದೂರು: ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

205
0

ಉಡುಪಿ, ಮಾ. 15: ಜಿಲ್ಲಾ ಲೋಕಾಯುಕ್ತ ಪೊಲೀಸ್ ವಿಭಾಗದ ವತಿಯಿಂದ ಬೈಂದೂರು ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕ ಅಹವಾಲು ಕಾರ್ಯಕ್ರಮ ನಡೆಯಿತು. ಪೊಲೀಸ್ ಉಪಾಧೀಕ್ಷಕ ಕೆ. ಸಿ. ಪ್ರಕಾಶ್, ಪೊಲೀಸ್ ನಿರೀಕ್ಷಕ ರಫೀಕ್ ಎಂ., ಬೈಂದೂರು ತಾಲೂಕು ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ, ಭೂ ಮಾಪಕಿ ಶೈಲಜಾ, ಶಿರೂರು ಗ್ರಾಮ ಪಂಚಾಯತ್ ಪಿ.ಡಿ.ಓ ರಾಜೇಂದ್ರ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಾರ್ವಜನಿಕರಿಂದ ಒಟ್ಟು 3 ಅರ್ಜಿಗಳು ಸ್ವೀಕೃತವಾಗಿದ್ದು, ಅವುಗಳಲ್ಲಿ 1 ಅರ್ಜಿಯನ್ನು ಸ್ಥಳದಲ್ಲಿ ಇತ್ಯರ್ಥಪಡಿಸಿ, 2 ಅರ್ಜಿಗಳಲ್ಲಿ ಪ್ರಪತ್ರ 1 ಮತ್ತು 2 ನ್ನು ನೀಡಿದ್ದು, ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಸೂಚಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.