ಉಡುಪಿ, ಮಾ. 15: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಹಾಗೂ ಅದಕ್ಕೆ ಹೊಂದಿಕೊಂಡಿರುವ ಗ್ರಾಮ ಪಂಚಾಯತ್ ಗಳಿಗೆ ಕುಡಿಯುವ ನೀರು ಪೂರೈಸುತ್ತಿರುವ ಬಜೆ ಡ್ಯಾಮ್ ಹಾಗೂ ಶಿರೂರು ಡ್ಯಾಮ್ ಗೆ ಶಾಸಕ ಕೆ. ರಘುಪತಿ ಭಟ್ ಅವರು ನಗರಸಭೆಯ ಅಧಿಕಾರಿಗಳೊಂದಿಗೆ ಬುಧವಾರ ಭೇಟಿ ನೀಡಿ ನೀರಿನ ಮಟ್ಟವನ್ನು ಪರಿಶೀಲಿಸಿದರು. ಮುಂದಿನ ದಿನಗಳಲ್ಲಿ ನೀರಿನ ಮಟ್ಟ ಇಳಿಮುಖವಾಗಲಿರುವುದರಿಂದ ನೀರಿನ ಪಂಪಿಂಗ್ ಹಾಗೂ ನೀರಿನ ಪೂರೈಕೆಗೆ ಬೇಕಾಗುವ ಪೂರ್ವ ತಯಾರಿ ಕೈಗೊಳ್ಳುವ ಬಗ್ಗೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.
ನಗರಸಭಾ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಶ ಕೊಡವೂರು, ನಗರ ಸಭಾ ಸದಸ್ಯರಾದ ಗಿರೀಶ್ ಅಂಚನ್, ಪೌರಾಯುಕ್ತರಾದ ಆರ್.ಪಿ ನಾಯ್ಕ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಯಶ್ವಂತ್ ಪ್ರಭು ಉಪಸ್ಥಿತರಿದ್ದರು.