ಉಡುಪಿ, ಮಾ. 18: ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿ ಉಡುಪಿ ಜಿಲ್ಲೆ ಇವರ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲಾ ಸ್ವ-ಸಹಾಯ ಸಂಘದ ಮಹಿಳೆಯರಿಗಾಗಿ ಮತದಾನ ಜಾಗೃತಿ ಕುರಿತ ರಂಗೋಲಿ ಸ್ಪರ್ಧೆಯು ಶನಿವಾರ ನಗರದ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಿತು.
ಸ್ಪರ್ಧೆಯಲ್ಲಿ ಜಿಲ್ಲೆಯ ಸ್ವ-ಸಹಾಯ ಸಂಘದ ಮಹಿಳೆಯರು ಭಾಗವಹಿಸಿ, ತಮ್ಮ ಪ್ರತಿಭೆ ಪ್ರದರ್ಶಿಸಿದರು. ಮತದಾನ ಕುರಿತ ಜಾಗೃತಿ, ಅರಿವು ಮೂಡಿಸುವ ಈ ಕಾರ್ಯಕ್ರಮದಲ್ಲಿ ಸ್ಪರ್ಧಿಗಳು ಬಿಡಿಸಿದ ರಂಗೋಲಿಗಳು ಒಂದಕ್ಕಿಂತ ಒಂದು ವಿಭಿನ್ನವಾಗಿದ್ದು, ಮತದಾನದ ಬಗ್ಗೆ ಅರಿವು ಮೂಡಿಸುವ ಜೊತೆಗೆ ನೋಡುಗರ ಗಮನ ಸೆಳೆಯಿತು.
ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕಿರಣ್ ಪಡ್ನೇಕರ್, ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್, ಯೋಜನಾ ನಿರ್ದೇಶಕ ನವೀನ್ ಕುಮಾರ್, ಮುಖ್ಯ ಲೆಕ್ಕಾಧಿಕಾರಿ ಪ್ರಸನ್ನ ಭಕ್ತ, ತಾಲೂಕು ಸಂಜೀವಿನಿ ಒಕ್ಕೂಟಗಳ ಅಧ್ಯಕ್ಷರು ಹಾಗೂ ಇತರ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.